ತಾರಾನಾಥ್ ಆರೋಗ್ಯ ವಿಚಾರಿಸಿದ ಸಚಿವ ಮಹದೇವಪ್ಪ

Minister Mahadevappa inquired about Taranath's health
Published on

ಮೈಸೂರು: ಪದ್ಮಶ್ರೀ ಪುರಸ್ಕೃತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಭಾನುವಾರ ತಾರಾನಾಥ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಕಳೆದ 15 ದಿಗಳ ಹಿಂದೆ ಆಸ್ಪತ್ರೆಗೆ ದಾಖಲಾದ ತಾರಾನಾಥ್ ಅವರ ಆರೋಗ್ಯದ ಸ್ಥಿತಿಗತಿ ಕುರಿತು ಸಚಿವರು ವೈದ್ಯರು ಹಾಗೂ ಕುಟುಂಬದ ಸದಸ್ಯರಿಂದ ಮಾಹಿತಿ ಪಡೆದು ಶೀಘ್ರ ಚೇತರಿಸಿಕೊಳ್ಳುವಂತೆ ಹಾರೈಸಿದರು. ಅಲ್ಲದೆ ಚಿಕಿತ್ಸೆಗೆ ಸರ್ಕಾರದ ನೆರವು ದೊರಕಿಸಿಕೊಡುವ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭ ಕಾಂಗ್ರೆಸ್ ಸಾಂಸ್ಕೃತಿಕ ಸಮಿತಿ ಜಿಲ್ಲಾಧ್ಯಕ್ಷೆ ಡಾ.ಶ್ವೇತಾ ಮಡಪ್ಪಾಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net