ಹೆಬ್ಬಾರರನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳೋದು ಹೈಕಮಾಂಡ್ ಗೆ ಬಿಟ್ಟ ವಿಚಾರ - ವೈದ್ಯ

Mankal Vaidya
Published on

ಕಾರವಾರ:ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ನನ್ನ ಆತ್ಮೀಯ ಸ್ನೇಹಿತರು. ನಾನು ಸಚಿವನಾದ ನಂತರ ಅಭಿವೃದ್ಧಿ ವಿಚಾರಗಳ ಬಗ್ಗೆ ಅವರ ಬಳಿ ಸಲಹೆ ಕೇಳಿದ್ದೇನೆ. ಆದರೆ, ರಾಜಕೀಯ ಮಾತನಾಡಿಲ್ಲ. ಕಾಂಗ್ರೆಸ್ ಸೇರುವ ವಿಚಾರವನ್ನು ನಾನು ಅವರ ಜತೆ ಚರ್ಚಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
ಮಾಧ್ಯಮ ಪ್ರತಿನಿಧಿಗಳ ಜತೆ ಭಾನುವಾರ ಮಾತನಾಡಿದ ಅವರು, ಶಿವರಾಮ ಹೆಬ್ಬಾರ ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.

ಕಾಂಗ್ರೆಸ್ ಒಂದು ಸಮುದ್ರ. ಇಲ್ಲಿಗೆ ನದಿಗಳು ಬಂದು ಸೇರುತ್ತವೆ. ಹೆಬ್ಬಾರರು ತವರಿಗೆ ಮರಳಬಹುದು ಎಂದರು.

ಕಾಂಗ್ರೆಸ್‌ನಲ್ಲಿ ಯಾವುದೇ ಬಣವಿಲ್ಲ. ಕಾಂಗ್ರೆಸ್‌ನ ಎಲ್ಲ 135 ಶಾಸಕರು ಸಿದ್ದರಾಮಯ್ಯ ಅವರ ಬಳಿಯೂ, ಡಿ.ಕೆ.ಶಿವಕುಮಾರ್ ಜತೆಯೂ ಇದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಬೇಕು ಎಂದು ಹೈಕಮಾಂಡೆ ತೀರ್ಮಾನ ಮಾಡಿದರೆ ಎಲ್ಲ 135 ಶಾಸಕರು ಬೆಂಬಲಿಸಲಿದ್ದಾರೆ ಎಂದರು. ಬಿಜೆಪಿಗರಿಗೆ ತಲೆಯೇ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ವ್ಯಂಗ್ಯವಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net