ಮಹಾಲಕ್ಷ್ಮೀ ಬ್ಯಾಂಕಿಗೆ ಸಚಿವ ಮಾಂಕಳ ವೈದ್ಯ ಭೇಟಿ

udp-5-vaidya
Published on

ಉಡುಪಿ: ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್  ಆಡಳಿತ ಕಚೇರಿಗೆ ಮೀನುಗಾರಿಕೆ ಮತ್ತು ಬಂದರು ಸಚಿವ ಮಾಂಕಾಳ ವೈದ್ಯ ಸೋಮವಾರ ಭೇಟಿ ನೀಡಿದರು. ಬ್ಯಾಂಕಿನ ಅಧ್ಯಕ್ಷ, ಶಾಸಕ ಯಶ್ ಪಾಲ್ ಸುವರ್ಣ  ಬ್ಯಾಂಕಿನ ವತಿಯಿಂದ ಸನ್ಮಾನಿಸಿದರು.

ಮಹಾಲಕ್ಷ್ಮೀ ಬ್ಯಾಂಕಿನ ವ್ಯವಹಾರ, ಪ್ರಗತಿ ಹಾಗೂ ಕಾರ್ಯ ಯೋಜನೆಗಳ ಬಗ್ಗೆ ಮಾಹಿತಿ ಪಡೆದ ಸಚಿವರು, ನಿರಂತರ ಪ್ರಗತಿಯೊಂದಿಗೆ ಗ್ರಾಹಕರಿಗೆ ಆಧುನಿಕ ಬ್ಯಾಂಕಿಂಗ್ ಸೇವೆ ನೀಡುತ್ತಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ, ಬ್ಯಾಂಕಿನ ಉಪಾಧ್ಯಕ್ಷ ವಾಸುದೇವ ಸಾಲ್ಯಾನ್, ಮಲ್ಪೆ ಯಾಂತ್ರಿಕ ಟ್ರಾಲ್ ದೋಣಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ರಾಮಚಂದ್ರ ಕುಂದರ್, ಮಲ್ಪೆ ಮೀನುಗಾರ ಸಂಘದ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಕಡೆಕಾರ್, ಕೋಶಾಧಿಕಾರಿ ಪ್ರಕಾಶ್ ಬಂಗೇರ, ಬ್ಯಾಂಕಿನ ನಿರ್ದೇಶಕ ವಿನಯ ಕರ್ಕೇರ, ಸುರೇಶ್ ಬಿ.ಕರ್ಕೇರ, ವೆಂಕಟರಮಣ ಕಿದಿಯೂರು, ಬ್ಯಾಂಕಿನ ವ್ಯವಸ್ಥಾಪನಾ ನಿರ್ದೇಶಕ  ಶರತ್ ಕುಮಾರ್ ಶೆಟ್ಟಿ, ಸಹಾಯಕ ಪ್ರಧಾನ ವ್ಯವಸ್ಥಾಪಕಿ ಶಾರಿಕಾ ಕಿರಣ್,  ವೃತ್ತಿಪರ ಸಲಹೆಗಾರ ಪ್ರದಿಪ್ ಆರ್. ಭಕ್ತ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net