

ಮೈಸೂರು: ವಿಶ್ವ ಹುಲಿ ದಿನಾಚರಣೆ ಅಂಗವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರಗೇಶ ನಿರಾಣಿ ಅವರು ಮೊಮ್ಮಗ ಸಮರ್ಥ್ ಹೆಸರಿನಲ್ಲಿ 2 ಲಕ್ಷ ರೂ. ನೀಡಿ ಮೈಸೂರು ಮೃಗಾಲಯದಲ್ಲಿ ‘ಮಾನ್ಯ’ ಹೆಣ್ಣು ಹುಲಿಯನ್ನು 1 ವರ್ಷದ ಅವಧಿಗೆ ದತ್ತು ಪಡೆದಿದ್ದಾರೆ.
ದತ್ತು ಸ್ವೀಕಾರ ಪ್ರಮಾಣ ಪತ್ರವನ್ನು ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಶಿವಕುಮಾರ್ ಬಿಜೆಪಿ ನಗರ ಮಾಧ್ಯಮ ವಕ್ತಾರ ಕೇಬಲ್ ಮಹೇಶ್ ಅವರಿಗೆ ಹಸ್ತಾಂತರಿಸಿದರು. ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ನಗರಾಧ್ಯಕ್ಷ ಜೋಗಿ ಮಂಜು, ನಗರ ಪಾಲಿಕೆ ಸದಸ್ಯ ಕೆ.ಜೆ. ರಮೇಶ್, ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಹಾಗೂ ಇತರರು ಇದ್ದರು.