ಸಾಮಾಜಿಕ ಸೇವೆಯೊಂದಿಗೆ ಸಿಆರ್‌ಎಸ್ ಜನ್ಮದಿನಾಚರಣೆ: ರೋಗಿಗಳಿಗೆ ಹಣ್ಣು ವಿತರಣೆ, ಅನ್ನದಾಸೋಹ

Minister N. Chaluvarayaswamy birthday celebration Mandya
Published on

ಮಂಡ್ಯ: ಸಾಮಾಜಿಕ ಸೇವೆಯೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಜನ್ಮದಿನವನ್ನು ವಿಶೇಷವಾಗಿ ಆಚರಣೆ ಮಾಡಲಾಯಿತು.

ಮಾಜಿ ಶಾಸಕ ಎಚ್.ಬಿ.ರಾಮು, ಮಂಡ್ಯ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಕಂಬದಹಳ್ಳಿ ಪುಟ್ಟಸ್ವಾಮಿ, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ ನೇತೃತ್ವದಲ್ಲಿ ವಿದ್ಯಾನಗರದಲ್ಲಿರುವ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಮಿಮ್ಸ್ ಆವರಣದ ಮಮತೆಯ ಮಡಿಲಿನಲ್ಲಿ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಉಪಹಾರ ಹಾಗೂ ಊಟದ ವ್ಯವಸ್ಥೆ, ಮಿಮ್ಸ್ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ಮತ್ತು ಸೇವಾಕಿರಣ ವೃದ್ಧಾಶ್ರಮದ ವೃದ್ದರಿಗೆ ಬೆಡ್‌ಶೀಟ್ ವಿತರಣೆ ಮಾಡಲಾಯಿತು.

ಕಂಬದಹಳ್ಳಿ ಪುಟ್ಟಸ್ವಾಮಿ ಮಾತನಾಡಿ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ರಾಜಕಾರಣದಲ್ಲಿ ಇನ್ನೂ ಉತ್ತಮ ಅವಕಾಶಗಳು ಲಭಿಸಲಿ ಎಂದು ಹಾರೈಸಿದರು.

ಮಾಜಿ ಶಾಸಕ ಎಚ್.ಬಿ.ರಾಮು ಮಾತನಾಡಿ, ಎನ್.ಚಲುವರಾಯಸ್ವಾಮಿ ಅವರು ಕೆ.ವಿ.ಶಂಕರಗೌಡ, ಎಚ್.ಕೆ.ವೀರಣ್ಣಗೌಡ, ಜಿ.ಮಾದೇಗೌಡ, ಎಸ್.ಎಂ.ಕೃಷ್ಣ ಅವರ ನಂತರ ನಾಯಕತ್ವದಲ್ಲಿ ಬೆಳೆದು ಬಂದು ಎಸ್.ಡಿ.ಜಯರಾಂ ಗರಡಿಯಲ್ಲಿ ಹೆಚ್ಚಿನ ನಾಯಕತ್ವ ರೂಪಿಸಿಕೊಂಡು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗುವ ಮೂಲಕ ಗ್ರಾಮೀಣ ಪ್ರದೇಶದ ಕೆಳಹಂತದ ಜನರಿಗೆ ನಾಯಕತ್ವ ಕೊಟ್ಟವರು ಎಂದು ಹೇಳಿದರು.

ನಗರಸಭೆ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ನೀಲಾಮೂರ್ತಿ, ಸೋಮಶೇಖರ್, ಅಭಿಲಾಷ್, ಅಪ್ಪಾಜಿಗೌಡ, ಶ್ರೀಧರ್, ನವೀನ್, ಶಂಕರಲಿಂಗೇಗೌಡ, ದೀಪಕ್, ಶಿವನಂಜು, ಸುಂಡಹಳ್ಳಿ ಮಂಜುನಾಥ್, ಎಂ.ಎಸ್.ಚಿದಂಬರ್, ಸಿ.ಎಂ.ದ್ಯಾವಪ್ಪ, ಕೃಷ್ಣ, ನಾಗೇಶ್ ಇತರರಿದ್ದರು.

ಜಿಲ್ಲೆಯ ಅಭಿವೃದ್ಧಿಯ ಹರಿಕಾರ

ಎನ್.ಚಲುವರಾಯಸ್ವಾಮಿ ಅವರು ಎರಡು ಬಾರಿ ಸಚಿವರಾಗಿ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮ ನೀಡಿದ್ದಾರೆ ಎಂದು ಮಂಡ್ಯ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು ಹೇಳಿದರು.

ಎಂದಿಗೂ ಅಧಿಕಾರಕ್ಕೆ ಆಸೆ ಪಡದೇ ಜಿಲ್ಲೆಗೆ ಶಾಶ್ವತ ಯೋಜನೆಗಳನ್ನು ಜಾರಿಗೆ ತಂದವರು. ಆರೋಗ್ಯ ಸಚಿವರಾಗಿದ್ದಾಗ ಮಂಡ್ಯಕ್ಕೆ ಮೆಡಿಕಲ್ ಕಾಲೇಜು ಪ್ರಾರಂಭಿಸಿದರು. ಇದರಿಂದಾಗಿ ಸಾವಿರಾರೂ ವೈದ್ಯ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸಹಕಾರಿಯಾಗಿದೆ. ಸ್ಥಗಿತಗೊಂಡಿದ್ದ ಮೈಷುಗರ್ ಕಾರ್ಖಾನೆಗೆ ಅನುದಾನ ಕೊಡಿಸಿ ಪುನಶ್ಚೇತನಗೊಳಿಸಿದ್ದಾರೆ. ಇದೀಗ ಜಿಲ್ಲೆಯ ಜನರ ಬಹು ವರ್ಷದ ಬೇಡಿಕೆಯಂತೆ ಸಮಗ್ರ ಕೃಷಿ ವಿಶ್ವವಿದ್ಯಾನಿಲಯವನ್ನು ತಂದಿದ್ದಾರೆ. ಇದು ಜಿಲ್ಲೆಯ ಕೃಷಿಗೆ ಹೊಸ ದಿಕ್ಕನ್ನು ನೀಡಲಿದೆ ಎಂದರು.

ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರನ್ನು ಸಮಾನವಾಗಿ ಕಾಣುವ ವ್ಯಕ್ತಿತ್ವ ಹೊಂದಿದ್ದಾರೆ. ಈ ಕಾರಣದಿಂದಲೇ ಅವರನ್ನು ಎಲ್ಲರೂ ಮೆಚ್ಚಿನ ನಾಯಕರಾಗಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಯತ್ತ ಸಾಗುವ ನಿಟ್ಟಿನಲ್ಲಿ ಅವರ ನಾಯಕತ್ವಕ್ಕೆ ದೇವರು ಇನ್ನಷ್ಟು ಬಲ ನೀಡಲಿ ಎಂದು ಪ್ರಾರ್ಥಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net