

ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೆ.5 ಮತ್ತು 6ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
5ರಂದು ಬೆಳಗ್ಗೆ 10.30ಕ್ಕೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಸಂಜೆ 4 ಗಂಟೆಗೆ ನಾಗಮಂಗಲ ತಾಲೂಕು ಯಡವನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ ಕಟ್ಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. 5ರಂದು ಬೆಳಗ್ಗೆ 9.30ಕ್ಕೆ ಕೆಶಿಪ್ ವತಿಯಿಂದ ನಿರ್ಮಾಣವಾಗುತ್ತಿರುವ ಮಾಗಡಿ-ಜಲಸೂರು ರಸ್ತೆ ಕಾಮಗಾರಿ ವೀಕ್ಷಣೆ, 4.30ಕ್ಕೆ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.