35 ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ಸೌಲಭ್ಯ

k s eshwar (1)
Published on

ಶಿವಮೊಗ್ಗ: ನಗರದಲ್ಲಿರುವ ಘೊಷಿತ ಸರ್ಕಾರಿ ಹಾಗೂ ನಗರಪಾಲಿಕೆ ಮಾಲೀಕತ್ವದಲ್ಲಿರುವ 35 ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದ್ದು, ಮನೆ ನಂಬರ್ ನೀಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲು ಸಮೀಕ್ಷೆ ಕೈಗೊಳ್ಳುವ ಕುರಿತು ಮಂಗಳವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸಮೀಕ್ಷೆ ಪೂರ್ಣಗೊಂಡ ಬಳಿಕ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಮಾರ್ಗಸೂಚಿ ಅನ್ವಯ ಹಕ್ಕುಪತ್ರ ವಿತರಿಸಲಾಗುವುದು. ಮನೆಯ ಚಕ್ಕುಬಂದಿ ಮತ್ತಿತರ ವಿವರಗಳನ್ನು ಹಕ್ಕುಪತ್ರದಲ್ಲಿ ನಮೂದಿಸಲಾಗುವುದು. ಇದರಿಂದ ಮುಂದಿನ ದಿನಗಳಲ್ಲಿ ಫಲಾನುಭವಿಗಳು ಬ್ಯಾಂಕ್​ನಿಂದ ಸಾಲ ಪಡೆದು ಮನೆ ನಿರ್ವಿುಸಿಕೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದರು.

ಸಮೀಕ್ಷೆಗೆ ಕೊಳಚೆ ಅಭಿವೃದ್ಧಿ ಮಂಡಳಿ, ನಗರಪಾಲಿಕೆ, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಡಿಸಿ ಕಚೇರಿ ಅನುಭವಿ ಸಿಬ್ಬಂದಿ ನೆರವು ಪಡೆಯಲಾಗá-ವುದು. ನೌಕರರು ಸೇವಾ ಭಾವನೆಯಿಂದ ಕಾರ್ಯನಿರ್ವಹಿಸಬೇಕು. ಏನಾದರೂ ಸಮಸ್ಯೆ, ಗೊಂದಲವಿದ್ದರೆ ಹಿರಿಯ ಅಧಿಕಾರಿಗಳನ್ನು ಸಂರ್ಪಸಬೇಕು ಎಂದು ತಿಳಿಸಿದರು.

ಮೇಯರ್ ಸುವರ್ಣಾ ಶಂಕರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಆಶ್ರಯ ಸಮಿತಿ ಅಧ್ಯಕ್ಷ ಶಶಿಧರ್, ಕೊಳೆಗೇರಿ ಅಭಿವೃದ್ಧಿ ಮಂಡಳಿ ಕಾರ್ಯಪಾಲಕ ಅಭಿಯಂತ ಮಂಜುನಾಥ ಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net