ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಕೊಪ್ಪಳ ಜಿಲ್ಲಾ ಪ್ರವಾಸ ನಾಳೆ: ನೀರು ಪೂರೈಕೆ ಕಾಮಗಾರಿಗೆ ಚಾಲನೆ

news-12-byrathi-basavaraj 1
Published on

ಕೊಪ್ಪಳ: ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಮಾ.12ರಂದು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಬೆಳಗ್ಗೆ 10.30ಕ್ಕೆ ತಾವರಗೇರಾ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ಮಧ್ಯಾಹ್ನ 12 ಗಂಟೆಗೆ ತಾವರಗೇರಾ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಹಮ್ಮಿಕೊಂಡಿರುವ ತಾವರಗೇರಾ ಪಟ್ಟಣಕ್ಕೆ ತುರವಿಹಾಳ ಹತ್ತಿರದ ತುಂಗಭದ್ರಾ ಕಾಲುವೆಯಿಂದ ನೀರು ಸರಬರಾಜು ಮಾಡುವ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು. ಮಧ್ಯಾಹ್ನ 2ಗಂಟೆಗೆ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆಂದು ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net