ಸಚಿವ ಪ್ರಧಾನ ಭೇಟಿಯಾದ ಡಾ. ಕೋರೆ

22Jaggu5
ಕೇಂದ್ರ ಶಿಕ್ಷಣ ಸಚಿವರಾಗಿ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ ಧರ್ಮೇಂದ್ರ ಪ್ರಧಾನ ಅವರನ್ನು ನವದೆಹಲಿಯಲ್ಲಿ ಬೆಳಗಾವಿ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರು ಸೋಮವಾರ ಭೇಟಿಯಾಗಿ ಶುಭಕೋರಿದರು.
Published on

ಬೆಳಗಾವಿ: ಕೇಂದ್ರ ಶಿಕ್ಷಣ ಸಚಿವರಾಗಿ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ ಧರ್ಮೇಂದ್ರ ಪ್ರಧಾನ ಅವರನ್ನು ನವದೆಹಲಿಯಲ್ಲಿ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರು ಸೋಮವಾರ ಭೇಟಿಯಾಗಿ ಶುಭಕೋರಿದರು. ಪ್ರಸಕ್ತ ಶಿಕ್ಷಣ ವ್ಯವಸ್ಥೆ ಹಾಗೂ ದೇಶದ ಕಲಿಕಾ ವ್ಯವಸ್ಥೆಯ ಬೆಳವಣಿಗೆಗಳ ಕುರಿತು ಚರ್ಚಿಸಿದರು.

ಡಾ.ಪ್ರಭಾಕರ ಕೋರೆ ಮಾತನಾಡಿ, ಕೆಎಲ್‌ಇ ಸಂಸ್ಥೆಯ ವತಿಯಿಂದ ದೇಶ ಹಾಗೂ ವಿದೇಶದಲ್ಲೂ ಶೈಕ್ಷಣಿಕ ಅಂಗಸಂಸ್ಥೆಗಳನ್ನು ತೆರೆಯಲಾಗಿದೆ. ವೈದ್ಯಕೀಯ, ತಾಂತ್ರಿಕ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದ್ದು, ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳಿಗೂ ಹೈಟೆಕ್ ಶಿಕ್ಷಣ ಕೈಗೆಟುಕುವಂತೆ ಸಂಸ್ಥೆ ಶ್ರಮಿಸುತ್ತಿದೆ. ದೇಶದ ಶೈಕ್ಷಣಿಕ ವ್ಯವಸ್ಥೆ ಬಲಪಡಿಸಲು ಕೆಎಲ್‌ಇ ಸಂಸ್ಥೆ ಸನ್ನದ್ಧವಾಗಿದ್ದು, ಸಂಶೋಧನಾ ಕ್ಷೇತ್ರದಲ್ಲೂ ಗುರುತರ ಕೆಲಸ ಮಾಡುತ್ತಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.

ಲಕ್ಷಾಂತರ ಜನರಿಗೆ ಶಿಕ್ಷಣ ನೀಡುವ ಜತೆಗೆ ಸಾವಿರಾರು ಜನರಿಗೆ ಉದ್ಯೋಗ ಕಲ್ಪಿಸುವ ಮೂಲಕ ಕೆಎಲ್‌ಇ ಸಂಸ್ಥೆ ಸಾಮಾಜಿಕ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸುತ್ತಿದೆ. ಸಂಸ್ಥೆಯ ಮುಂದಿನ ಯೋಜನೆಗಳಿಗೆ ನಿಮ್ಮ ಸಹಕಾರವೂ ಇರಲಿ ಎಂದು ಡಾ.ಕೋರೆ ಅವರು ಸಚಿವರಿಗೆ ಮನವಿ ಮಾಡಿದರು. ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net