

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಹೇಳಿಕೆ | ಡಿಸಿ ಕಚೇರಿಯಲ್ಲಿ ಮಕ್ಕಳಿಗೆ ಪುಸ್ತಕ ವಿತರಣೆ
ವಿಜಯವಾಣಿ ಸುದ್ದಿಜಾಲ ಕಲಬುರಗಿ
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿ ಸರ್ಕಾರಿ ಪ್ರೌಢ ಶಾಲೆಯ ೯ ಮತ್ತು ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾಸರೆ ಪುಸ್ತಕ ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ನಾಲ್ವರು ಮಕ್ಕಳಿಗೆ ಸಾಂಕೇತಿಕವಾಗಿ ಪುಸ್ತಕ ವಿತರಣೆ ಮಾಡಿದ ಅವರು, ಕಲಿಕೆಯಲ್ಲಿ ಹಿಂದುಳಿದ ಸಿ ಮತ್ತು ಸಿ+ಗ್ರೇಡ್ ಸಾಮರ್ಥ್ಯದ ಮಕ್ಕಳನ್ನು ಗುರಿಯಾಗಿಸಿ ಅವರ ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿ ಕೆಕೆಆರ್‌ಡಿಬಿಯಿಂದ ಪ್ರಾದೇಶಿಕ ನಿಧಿಯಡಿ ಸುಮಾರು ೮೫ ಲಕ್ಷ ರೂ. ಖರ್ಚು ಮಾಡಿ ಜಿಲ್ಲೆಯ ೨೯೮ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಮಾಡುವ ಉz್ದೆÃಶ ಹೊಂದಲಾಗಿದೆ ಎಂದರು.
೯ನೇ ತರಗತಿಯ ವಿದ್ಯಾರ್ಥಿಗಳಿಗೆ ೧೨,೧೦೭ ಮತ್ತು ೧೦ನೇ ತರಗತಿ ವಿದ್ಯಾರ್ಥಿಗಳಿಗೆ ೧೨,೬೩೩ ಸೇರಿ ಒಟ್ಟು ೨೪,೭೪೦ ಪುಸ್ತಕ ವಿತರಿಸಲಾಗುತ್ತಿದ್ದು, ಮುಂದಿನ ದಿನದಲ್ಲಿ ಎಲ್ಲ ಶಾಲೆ ಮಕ್ಕಳಿಗೆ ಪುಸ್ತಕ ತಲುಪಿಸಲಾಗುವುದು ಎಂದು ಹೇಳಿದರು.
ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಪಂ ಸಿಇಒ ಭಂವರ್‌ಸಿAಗ್ ಮೀನಾ, ಪಾಲಿಕೆ ಉಪ ಆಯುಕ್ತ ಅವಿನಾಶ ಶಿಂಧೆ, ಡಿಡಿಪಿಐ ಸೂರ್ಯಕಾಂತ ಮದಾನೆ ಇತರರಿದ್ದರು.