

ತುಮಕೂರು: ಹಾಸನಾಂಬ ಜಾತ್ರಾ ಮಹೋತ್ಸವದ ಹಿನ್ನೆಲೆ ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಹಾಗೂ ಆದಿ ಚುಂಚನಗಿರಿ ಶ್ರೀ ಕ್ಷೇತ್ರದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಹಾಸನ ಜಿಲ್ಲಾಡಳಿತ ವತಿಯಿಂದ ಉದ್ಘಾಟನಾ ಕಾರ್ಯಕ್ರಮಕ್ಕೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಆಹ್ವಾನಿಸಿದರು. ಅ.24 ರಿಂದ ನ.3ರವರೆಗೆ ಹಾಸನಾಂಬ ಉತ್ಸವ ನಡೆಯಲಿದೆ.
ಈ ಸಂದರ್ಭದಲ್ಲಿ ಹಾಸನ ಸಂಸದ ಶ್ರೇಯಸ್ ಎಂ.ಪಟೇಲ, ಜಿಲ್ಲಾಧಿಕಾರಿ ಸತ್ಯಭಾಮ, ಸಿಇಒ ಪೂರ್ಣಿಮಾ, ಜಿಲ್ಲಾ ಪೊಲೀಸ್ ಅಧೀಕ್ಷಕಿ ಮಹಮ್ಮದ್ ಸುಜೀತಾ, ಅಪರ ಜಿಲ್ಲಾಧಿಕಾರಿ ಶಾಂತಲಾ, ಉಪವಿಭಾಗ ಅಧಿಕಾರಿ ಮಾರುತಿ, ತಹಸೀಲ್ದಾರ್ ಶ್ವೇತಾ ಉಪಸ್ಥಿತರಿದ್ದರು.