ಕುಕ್ಕೆಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ

New Project (4)
Published on

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೋಮವಾರ ಭೇಟಿ ನೀಡಿದರು. ಅರ್ಚಕ ಸತ್ಯನಾರಾಯಣ ನೂರಿತ್ತಾಯ ಮಹಾಪ್ರಸಾದ ನೀಡಿದರು. ತದನಂತರ ಹೊಸಳಿಗಮ್ಮನ ದರುಶನ ಮಾಡಿ ಪ್ರಸಾದ ಸ್ವೀಕರಿಸಿದರು.

ಮಾಜಿ ಸಚಿವ ರಮಾನಾಥ ರೈ, ಶಾಸಕಿ ಭಾಗೀರಥಿ ಮುರುಳ್ಯ, ರಾಜ್ಯ ಮುಜರಾಯಿ ಆಯುಕ್ತ ಡಾ.ಎಂ.ವಿ.ವೆಂಕಟೇಶ್, ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಂಜಿ, ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಎಇಒ ಯೇಸುರಾಜು, ಗ್ರಾ.ಪಂ. ಅಧ್ಯಕ್ಷೆ ಸುಜಾತಾ ಕಲ್ಲಾಜೆ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ರವಿಶಂಕರ ಶೆಟ್ಟಿ, ಮಲ್ಲಿಕಾ ಪಕ್ಕಳ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ.ರು, ಮಹೇಶ್ ಕುಮಾರ್ ಕೆ.ಎಸ್.ಕರಿಕ್ಕಳ, ಅಶೋಕ್ ನೆಕ್ರಾಜೆ, ಸೌವ್ಯಾ ಭರತ್, ಲೀಲಾ ಮನಮೋಹನ್, ಪ್ರವೀಣ ರೈ ಮರುವಂಜ, ಅಜಿತ್ ಕುಮಾರ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಲೋಲಾಕ್ಷ ಕೈಕಂಬ, ಸತೀಶ್ ಕೂಜುಗೋಡು, ಪವನ್ ಎಂ.ಡಿ., ಅಚ್ಚುತ್ತ ಗೌಡ ಬಳ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಸುಧೀರ್‌ಕುಮಾರ್ ಶೆಟ್ಟಿ, ಪ್ರಮುಖರಾದ ಎಂ.ಕೃಷ್ಣಪ್ಪ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net