ಸಚಿವ ರಮೇಶ ಜಾರಕಿಹೊಳಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ - ಡಾ.ಮಹಾಲಿಂಗಪ್ಪ ಕೋಲಕಾರ

Ramesh-Web
Published on

ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ
ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಎಂದು ಭಾರತೀಯ ದಲಿತ ಪ್ಯಾಂಥರ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಮಹಾಲಿಂಗಪ್ಪ ಕೋಲಕಾರ ಒತ್ತಾಯಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಬಿಜೆಪಿ ಸರ್ಕಾರದ ರಚನೆಯಲ್ಲಿ ರಮೇಶ ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ಜತೆಗೆ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ದಲಿತ ಮತ್ತು ಹಿಂದುಳಿದ ವರ್ಗಗಳನ್ನು ಮೇಲೆತ್ತುವ ನಿಟ್ಟಿನಲ್ಲಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಛಲವಾದಿ ಸಮಾಜದ ಹಾವೇರಿ ಶಾಸಕ ನೆಹರು ಓಲೇಕಾರ ಅವರಿಗೆ ಸಚಿವ ಸ್ಥಾನ ನೀಡಬೇಕು.

ಪರಿಶಿಷ್ಟ ಜಾತಿಯಲ್ಲಿಯೇ ಛಲವಾದಿ ಸಮಾಜ ಅತ್ಯಂತ ಹಿಂದುಳಿದಿದೆ. ಸಮುದಾಯದ ಸಾಕಷ್ಟು ಯುವಕ-ಯುವತಿಯರು
ಉದ್ಯೋಗವಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಛಲವಾದಿ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು. ಬಜೆಟ್‌ನಲ್ಲಿ ಶೇ. 10ರಷ್ಟು ಅನುದಾನವನ್ನು ಛಲವಾದಿ ಸಮಾಜಕ್ಕೆ ಮೀಸಲಿಡಬೇಕು ಎಂದು ವಿನಂತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net