ವಿಶೇಚೇತನ ಮಕ್ಕಳೊಂದಿಗೆ ಸಚಿವ ಸಂತೋಷ ಲಾಡ್ ಜನ್ಮದಿನಾಚರಣೆ

27 Dwd 6
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ನಗರದ ಶಿಕ್ಷಕಿಯರ ತರಬೇತಿ ಕೇಂದ್ರದಲ್ಲಿ ಗುರುವಾರ ವಿಶೇಚೇತನ ಮಕ್ಕಳು ಹಾಗೂ ಅವರ ಪಾಲಕರೊಂದಿಗೆ ಸಂವಾದ ನಡೆಸುವ ಮೂಲಕ ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡರು.

ಈ ವೇಳೆ ಮಾತನಾಡಿದ ಅವರು, ವಿಶೇಷಚೇತನ ಮಕ್ಕಳು ಅತ್ಯಂತ ದೃಢ ನಿಶ್ಚಯದ ಮಕ್ಕಳು. ತುಂಬ ಬುದ್ಧಿವಂತರು ಇರುತ್ತಾರೆ. ಅವರಿಗೆ ಸರಿಯಾದ ಆರೈಕೆ, ಚಿಕಿತ್ಸೆ, ಮೂಲ ಸೌಕರ್ಯಗಳು ಅಗತ್ಯವಿವೆ. ಸರ್ಕಾರವು ಅಗತ್ಯ ನೆರವು ಮತ್ತು ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.

ನ0ತರ ವಿಕಲಚೇತನ ಮಕ್ಕಳು ಹಾಗೂ ಅವರ ಪಾಲಕದೊಂದಿಗೆ ಸಂವಾದ ನಡೆಸಿದರು. ವಿಶೇಷಚೇತನ ಶಾಲೆಯ ಶಿಕ್ಷಕರು, ವೈದ್ಯರು, ಮುಖ್ಯಸ್ಥರನ್ನು ಸನ್ಮಾನಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಮಾತನಾಡಿದರು. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಬ್ಯಾಕೊಡ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಗಾಳಿ, ಕ್ಷೇತ್ರ ಶಿಕ್ಷಣಾಽಕಾರಿ ರಾಮಕೃಷ್ಣ ಸದಲಗಿ, ಜನಮುಖಿ ಸೇವಾ ಸಂಸ್ಥೆ ಮುಖ್ಯಸ್ಥ ಬಸವರಾಜ ಮ್ಯಾಗೇರಿ, ವಿದ್ಯಾ ಮ್ಯಾಗೇರಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net