ಹಾಸ್ಟೆಲ್‌ ಊಟ ಸವಿದ ಸಚಿವ ಸಂತೋಷ ಲಾಡ್

12 Dwd 7
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಸೈದಾಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ಉಸ್ತುವಾರಿ ಸಚಿವ ಸಂತೋಷ ಲಾಡ್ ಶುಕ್ರವಾರ ಸಂಜೆ ದಿಢೀರ್ ಭೇಟಿ ನೀಡಿದ್ದರು. ಹಾಸ್ಟೆಲ್‌ನ ಸ್ವಚ್ಛತೆ, ಊಟದ ವ್ಯವಸ್ಥೆ ಹಾಗೂ ವಿದ್ಯಾರ್ಥಿನಿಯರ ಹಾಜರಾತಿಯನ್ನು ಪರಿಶೀಲಿಸಿದರು.
ವಿದ್ಯಾರ್ಥಿನಿಯರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ ಸಚಿವ ಲಾಡ್, ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತರಬೇಕು ಎಂದರು. ಇದೇವೇಳೆ ವಿದ್ಯಾರ್ಥಿನಿಯರೊಂದಿಗೆ ರಾತ್ರಿಯೂಟ ಸವಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಪಿ., ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net