ಜಿಲ್ಲಾಸ್ಪತ್ರೆಗೆ ಸಚಿವ ಸಂತೋಷ ಲಾಡ್ ದಿಢೀರ್ ಭೇಟಿ; ಚಿಕಿತ್ಸೆಗೆ ದಾಖಲಾದವರ ಆರೋಗ್ಯ ವಿಚಾರಣೆ

12 Dwd 3
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನಗರದ ಜಿಲ್ಲಾಸ್ಪತ್ರೆಗೆ ಶುಕ್ರವಾರ ದಿಢೀರ್ ಭೇಟಿ ನೀಡಿದ್ದರು. ಡೆಂಘೆ ಚಿಕಿತ್ಸೆಗಾಗಿ ತೆರೆಯಲಾದ ವಿಶೇಷ ವಾರ್ಡ್, ಎಲುಬು- ಕಿಲು ವಾರ್ಡ್, ಮಕ್ಕಳ ವಾರ್ಡ್ ಮತ್ತು ಫಾರ್ಮಸಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ವಿವಿಧ ವಾರ್ಡ್ಗಳಲ್ಲಿ ಚಿಕಿತ್ಸೆಗೆ ದಾಖಲಾದವರನ್ನು ಮಾತನಾಡಿಸಿ ವೈದ್ಯರ ಸ್ಪಂದನೆ ಮತ್ತು ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದರು.
ಈ ವೇಳೆ ಮಾತನಾಡಿದ ಸಚಿವ ಲಾಡ್, ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಹಿರಿಯ ವೈದ್ಯಾಽಕಾರಿಗಳು ಪ್ರತಿದಿನ ವಾರ್ಡ್ಗಳಿಗೆ ಭೇಟಿ ನೀಡಬೇಕು. ರೋಗಿಗಳಿಗೆ ಸಕಾಲಕ್ಕೆ ಅಗತ್ಯ ಚಿಕಿತ್ಸೆ, ಔಷಽ ಸಿಗುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ರೋಗಿಗಳ ಅಹವಾಲುಗಳನ್ನು ಆಲಿಸಬೇಕು. ರೋಗಿಗಳಿಂದ ದೂರುಗಳು ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಅನುದಾನದೊಂದಿಗೆ ವಿವಿಧ ಕೈಗಾರಿಕೆಗಳ ಸಿಎಸ್‌ಆರ್ ನಿಽ ಪಡೆದು, ಆಸ್ಪತ್ರೆಗೆ ಹೆಚ್ಚುವರಿ ಸೌಲಭ್ಯ ಕಲ್ಪಿಸಬೇಕು. ಈ ಕುರಿತು ಯೋಜನೆ ರೂಪಿಸಿ ಸಲ್ಲಿಸಬೇಕು ಎಂದರು.
ಜಿಲ್ಲಾ ಶಸ್ತçಚಿಕಿತ್ಸಕ ಡಾ. ಸಂಗಪ್ಪ ಗಾಬಿ ಮಾತನಾಡಿ, ಜಿಲ್ಲಾ ಆಸ್ಪತ್ರೆಯ ಡೆಂಘೆ ವಾರ್ಡ್ನಲ್ಲಿ ಮಹಿಳೆ, ಮಕ್ಕಳು, ವಯಸ್ಕರು ಸೇರಿ 49 ಜನ ಡೆಂಘೆ ಶಂಕಿತರು ದಾಖಲಾಗಿದ್ದಾರೆ. ಮೂವರಿಗೆ ಡೆಂಘೆ ಖಚಿತಪಟ್ಟಿದ್ದು, ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಜಿಲ್ಲಾಽಕಾರಿ ದಿವ್ಯ ಪ್ರಭು, ಜಿಲ್ಲಾ ಆರೋಗ್ಯಾಽಕಾರಿ ಡಾ. ಶಶಿ ಪಾಟೀಲ, ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪ ಟಿ.ಕೆ., ಜಿಲ್ಲಾಸ್ಪತ್ರೆ ವೈದ್ಯರಾದ ಡಾ. ಶ್ರೀಧರ ಪಾಟೀಲ, ಡಾ. ಶಿಲ್ಪಾ ಭಟ್, ಡಾ. ಪ್ರಭು ಸಂಗಮ, ಸ್ನಾತಕೊತ್ತರ ವೈದ್ಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net