

ಬೆಳಗಾವಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪತ್ರಕರ್ತರ ನೂತನ ವಾಹನದಲ್ಲಿ ಸಂಚರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ನೂತನ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕಾಗಿ ಅಶೋಕ ನಗರದ ಬಳಿ ಪಾಲಿಕೆಯ ಜಾಗೆಯನ್ನು ಪರಿಶೀಲಿಸಿದರು.
ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ನಗರದ ಬುಡಾ ಆವರಣದಲ್ಲಿ ಮಂಗಳವಾರ ನೂತನ ವಾಹನಕ್ಕೆ ಹಸಿರು ನಿಶಾನೆ ತೋರಿಸಿದ ಅವರು, ಪತ್ರಕರ್ತರ ಜತೆಯಲ್ಲೇ ಪ್ರಯಾಣಿಸಿದ ಅವರು, ಜಿಲ್ಲೆಯಲ್ಲಿ ಪತ್ರಕರ್ತರ ಪ್ರವಾಸಕ್ಕಾಗಿ ನೂತನ ವಾಹನವು ಅನುಕೂಲವಾಗಲಿದೆ ಎಂದು ಹೇಳಿದರು.
ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ ಸಚಿವರಿಗೆ ಸಾಥ್ ನೀಡಿದರು.