

ಕಾರಟಗಿ: ಪಟ್ಟಣವನ್ನು ಸ್ವಚ್ಛ ಹಾಗೂ ಸುಂದರವಾಗಿಡಲು ಅಧಿಕಾರಿಗಳು ಗಮನ ನೀಡಬೇಕು ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಪುರಸಭೆಗೆ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಹೊಸದಾಗಿ ಖರೀದಿಸಿದ ವಾಹನಗಳಿಗೆ ಪೂಜೆ ಸಲ್ಲಿಸಿ, ಚಾಲನೆ ನೀಡಿದ ಬಳಿಕ ಸೋಮವಾರ ಮಾತನಾಡಿದರು. ಪಟ್ಟಣದ ಅಭಿವೃದ್ಧಿ ಬಗ್ಗೆ ಸರ್ವರು ಒಗ್ಗೂಡಿ ಕಾರ್ಯ ನಿರ್ವಹಿಸಬೇಕು. ಪಟ್ಟಣದ ಅಭಿವೃದ್ಧಿ ಹಾಗೂ ಜನ ಪರ ಕಾರ್ಯಗಳ ಬಗ್ಗೆ ಗಮನ ಹರಿಸಬೇಕು. ಆರೋಗ್ಯ ಕಾಪಾಡಿಕೊಳ್ಳಲು ಪಟ್ಟಣವನ್ನು ಸ್ವಚ್ಛವಾಗಿಡಬೇಕು. ಈ ನಿಟ್ಟಿನಲ್ಲಿ ಪುರಸಭೆಗೆ ಅಗತ್ಯವಿರುವ 2 ಆಟೋ ಟಿಪ್ಪರ್, 1 ಟ್ರ್ಯಾಕ್ಟರ್ ಖರೀದಿಸಲಾಗಿದೆ. ಸಾರ್ವಜನಿಕರಿಗೆ ಸಮಸ್ಯೆ ಆಗದ ರೀತಿ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿ ಕ್ರಮವಹಿಸಬೇಕು ಎಂದರು.
ಪುರಸಭೆ ಅಧ್ಯಕ್ಷೆ ರೇಖಾ ರಾಜಶೇಖರ ಆನೆಹೊಸೂರು, ಉಪಾಧ್ಯಕ್ಷೆ ದೇವಮ್ಮ ಗಂಗಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಈಶಪ್ಪ ಇಟ್ಟಂಗಿ, ಸದಸ್ಯ ಹಿರೇಬಸಪ್ಪ ಸಜ್ಜನ್, ಮುಖಂಡರಾದ ಶರಣೇಗೌಡ ಬೂದಗುಂಪಾ, ಶಶಿಧರಗೌಡ, ಕೆ. ಸಿದ್ದನಗೌಡ ಸೇರಿ ಇತರರಿದ್ದರು.