VIDEO| ಗದ್ದೆಗಿಳಿದು ಭತ್ತ ನಾಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ!

1153357
Published on

ಮಂಡ್ಯ: ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಸಂಪುಟದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ ನಂತರ ಕರ್ನಾಟಕದಲ್ಲಿ 'ಜನಾಶೀರ್ವಾದ ಯಾತ್ರೆ' ಕೈಗೊಂಡಿದ್ದಾರೆ. ಈ ಪ್ರಯುಕ್ತ ಇಂದು ಮಂಡ್ಯಕ್ಕೆ ಭೇಟಿ ನೀಡಿದ್ದಾರೆ.

ಮಂಡ್ಯ ತಾಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ ಸಚಿವೆ ಕರಂದ್ಲಾಜೆ, ಭತ್ತದ ಗದ್ದೆಗಿಳಿದು ರೈತರೊಂದಿಗೆ ಭತ್ತ ನಾಟಿ ಮಾಡಿದರು. ಈ ಸಂದರ್ಭದಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು, 'ಶೋಭಕ್ಕಂಗೆ ಜೈ' ಎಂದು ಜೈಕಾರ ಕೂಗಿದರು.

ನಂತರ ಸಚಿವ ಕೆ.ಸಿ.ನಾರಾಯಣಗೌಡ ಅವರು ನಾಟಿ ಯಂತ್ರ ಚಲಾಯಿಸಿ, ಯಂತ್ರದ ಮೂಲಕ ಭತ್ತದ ನಾಟಿ ಮಾಡಿದರು. ಯಂತ್ರದ ಮೇಲೆ ನಿಂತು ಅವರಿಗೆ ಸಚಿವೆ ಕರಂದ್ಲಾಜೆ, ಸಾಥ್ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net