ಪಡೀಲ್‌ನ ನೂತನ ಜಿಲ್ಲಾಧಿಕಾರಿ ಕಚೇರಿ ಕಾಮಗಾರಿ ಪರಿಶೀಲಿಸಿದ ಉಸ್ತುವಾರಿ ಸಚಿವ ಸುನೀಲ್‌ ಕುಮಾರ್‌

IMG-20220211-WA0005
Published on

ಮಂಗಳೂರು: ಪಡೀಲ್‌ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಪರಿಶೀಲಿಸಿದರು. ಶುಕ್ರವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಾಮಗಾರಿ ಪ್ರಗತಿ ಕುರಿತಂತೆ ಮಾಹಿತಿ ಪಡೆದರು.
ಕಾಮಗಾರಿಗೆ ಬೇಕಾದ ಅನುದಾನವನ್ನು ಬಿಡುಗಡೆಗೆ ವ್ಯವಸ್ಥೆ ಮಾಡಲಾಗುವುದು. ಶೀಘ್ರ ಕಟ್ಟಡದ ಕೆಲಸ ಪೂರ್ಣಗೊಳಿಸಿ ಕಾರ್ಯಾರಂಭಕ್ಕೆ ಉದ್ದೇಶಿಸಲಾಗಿದೆ ಎಂದರು. ಶಾಸಕರಾದ ಡಾ. ವೈ.ಭರತ್ ಶೆಟ್ಟಿ ಜತೆಗಿದ್ದರು. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಸಹಾಯಕ ಆಯುಕ್ತ ಮದನ್ ಮೋಹನ್, ಕಾಮಗಾರಿ ಉಸ್ತುವಾರಿ ವಹಿಸಿಕೊಂಡಿರುವ ಹೌಸಿಂಗ್‌ ಬೋರ್ಡ್‌ ಅಧಿಕಾರಿಗಳು, ಗುತ್ತಿಗೆದಾರರು ಈ ವೇಳೆ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net