ಸಚಿವ ಸುನಿಲ್ ಕುಮಾರ್ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ

IMG-20220529-WA0002
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಭಾನುವಾರ ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ ನಡೆಸಿದರು.
ಉರ್ವಾದ ಒಳಾಂಗಣ ಕ್ರೀಡಾಂಗಣ ಸಂಕೀರ್ಣ, ಮಂಗಳಾ ಸ್ಟೇಡಿಯಂ, ಎಮ್ಮೆಕೆರೆಯಲ್ಲಿ ಅಂತಾರಾಷ್ಟ್ರೀಯ ಈಜುಕೊಳ, ಸರ್ವೀಸ್ ಬಸ್ ನಿಲ್ದಾಣ, ಕಂಕನಾಡಿ ಮಾರುಕಟ್ಟೆ, ಕದ್ರಿ ಪಾರ್ಕ್ ರಸ್ತೆ ಮೊದಲಾದ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.
ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಮನಪಾ ಆಯುಕ್ತ ಅಕ್ಷಿ ಶ್ರೀಧರ್ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net