ಸಚಿವ ಶಿವರಾಜ ತಂಗಡಗಿ ಎಚ್ಚರಿಕೆ; ಕೆಲಸ ಮಾಡಿ ಇಲ್ಲವೆ ಕಠಿಣ ಕ್ರಮ ಎದುರಿಸಿ

22 Dwd 6 (Shivaraj Tangadagi)
Published on

ಧಾರವಾಡ: ಕೆಲಸದಲ್ಲಿ ನಿರ್ಲಕ್ಷ÷್ಯ ತೋರಿದರೆ ಸಹಿಸುವುದಿಲ್ಲ. ಕೆಲಸ ಮಾಡಿ, ಇಲ್ಲವೆ ಕಠಿಣ ಕ್ರಮ ಎದುರಿಸಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಶಿವರಾಜ ತಂಗಡಗಿ ಅಽಕಾರಿಗಗಳಿಗೆ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾಽಕಾರಿ ಕಚೇರಿಯ ಸಭಾಭವನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬೆಳಗಾವಿ ಕಂದಾಯ ವಿಭಾಗದ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಅಽಕಾರಿಗಳು ಕ್ಷೇತ್ರ ಮಟ್ಟದಲ್ಲಿ ಕಾರ್ಯ ನಿರ್ವಹಿಸಬೇಕು. ವಾಸ್ತವಿಕ ಸಂಗತಿಗಳ ಆಧಾರದ ಮೇಲೆ ಕಾರ್ಯ ನಿರ್ವಹಿಸಬೇಕು. ಇಲಾಖೆಯ ವಿಧ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗದಂತೆ ಎಚ್ಚರಿಕೆ ವಹಿಸಬೇಕು. ಗಂಗಾಕಲ್ಯಾಣ ಯೋಜನೆ ರೈತರಿಗೆ ಅನುಕೂಲಕರವಾಗಿದ್ದು, ಸಮರ್ಪಕ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net