ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಸಚಿವ ತಂಗಡಗಿ ಸೂಚನೆ

MINISTER TANGADAGI MEET BOND DIRECTION KOPPAL
ಕೊಪ್ಪಳದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಡಿಸಿ ನಲಿನ್ ಅತುಲ್, ಎಡಿಸಿ ಸಾವಿತ್ರಿ ಕಡಿ, ತಹಸೀಲ್ದಾರ್‌ಗಳು, ತಾಪಂ ಇಒಗಳು, ನಗರ, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಇದ್ದರು.
Published on

ಕೊಪ್ಪಳ: ಹೊಸದಾಗಿ ರಚನೆಯಾದ ಕಂದಾಯ ಗ್ರಾಮದಗಳ ಗ್ರಾಮಸ್ಥರಿಗೆ ಹಕ್ಕುಪತ್ರ ನೀಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಕೊಪ್ಪಳ ತಾಲೂಕಿನಲ್ಲಿ 8, ಗಂಗಾವತಿ 3, ಕುಷ್ಟಗಿ 6, ಯಲಬುರ್ಗಾ 7, ಕನಕಗಿರಿ 3 ಹಾಗೂ ಕಾರಟಗಿ ತಾಲೂಕಿನಲ್ಲಿ 9 ಒಟ್ಟು 36 ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದೆ. ಇವುಗಳಲ್ಲಿ 35 ಗ್ರಾಮಗಳಿಗೆ ಜಿಲ್ಲಾಧಿಕಾರಿಗಳಿಂದ ಪ್ರಸ್ತಾವನೆಗಳು ಸಲ್ಲಿಕೆಯಾಗಿದ್ದು, ಪ್ರಾಥಮಿಕ

ಅಧಿಸೂಚನೆ ಹಾಗೂ 27 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಇನ್ನು 7 ಪ್ರಸ್ತಾವನೆ ಬರುವುದು ಬಾಕಿ ಇದೆ. ಈ ಪ್ರಕರಣಗಳಲ್ಲಿ ಕಾನೂನು ಹಾಗೂ ಆಡಳಿತಾತ್ಮಕ ಸಮಸ್ಯೆ ಬಗೆಹರಿಸಿ. ಶೀಘ್ರವೇ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೆಲವು ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದೆ. ಸೂಕ್ತ ದಾಖಲೆಗಳ ಸಹಿತ ನ್ಯಾಯಾಲಯಕ್ಕೆ ವಾಸ್ತವಾಂಶ ಮನವರಿಕೆ ಮಾಡಿ. ತಡೆಯಾಜ್ಞೆ ತೆರವುಗೊಳಿಸಲು ಕ್ರಮವಹಿಸಿ. ಉಪ ವಿಭಾಗಾಧಿಕಾರಿ, ತಹಸೀಲ್ದಾರ ಹಂತದಲ್ಲಿರುವ ಪ್ರಕರಣಗಳನ್ನು ವಿಲೇವಾರಿಗೊಳಿಸಿ.

ಸರ್ಕಾರದ ಮಾರ್ಗಸೂಚಿ ಹಾಗೂ ನಿಯಮಾವಳಿ ಅನುದಾರ ಜಿಲ್ಲೆಯಲ್ಲಿ ಹೊಸದಾಗಿ ರಚಿಸಬೇಕಾಗಿರುವ ಕಂದಾಯ ಗ್ರಾಮಗಳ ಬಗ್ಗೆ ವರದಿ ರಚಿಸಿ. ಇಂಥ ವಿಷಯಗಳಲ್ಲಿ ಕಂದಾಯ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ. ನಿರ್ದಿಷ್ಟ ಕಾಲಮಿತಿ ಹಾಕಿಕೊಂಡು ಕಾರ್ಯಪ್ರವೃತ್ತರಾಗಿ ಎಂದು ತಾಕೀತು ಮಾಡಿದರು.

ಡಿಸಿ ನಲಿನ್ ಅತುಲ್, ಎಡಿಸಿ ಸಾವಿತ್ರಿ ಕಡಿ, ತಹಸೀಲ್ದಾರ್‌ಗಳು, ತಾಪಂ ಇಒಗಳು, ನಗರ, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net