ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ, ಐಸಿಯುಗೆ ದಾಖಲು..

Umesh Katti
Published on

ಬೆಂಗಳೂರು: ಸಚಿವ ಉಮೇಶ್ ಕತ್ತಿಗೆ ಹೃದಯಾಘಾತವಾಗಿದ್ದು, ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಅವರು ತಮ್ಮ ಮನೆಯಲ್ಲಿದ್ದಾಗ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದ್ದು, ಬಾತ್​ರೂಮ್​ನಲ್ಲಿ ಕುಸಿದುಬಿದ್ದಿದ್ದರು. ಊಟ ಮಾಡಿರಲಿಲ್ಲ. ಬಳಿಕ ತಕ್ಷಣ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಅವರ ಆರೋಗ್ಯ ಸ್ಥಿತಿಯ ಮೇಲೆ ಗಮನ ಇರಿಸಿದ್ದು, ಚಿಕಿತ್ಸೆ ಮುಂದುವರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net