ಉಂಡೆ ಕೊಬ್ಬರಿ ಖರೀದಿ ಹಣ ಮರುಪಾವತಿಗೆ ಸೋಮಣ್ಣ ಮನವಿ

Somanna_Unde
Published on

ತುಮಕೂರು: ರಾಜ್ಯದಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಲ್ಲಿ ಉಂಡೆ ಕೊಬ್ಬರಿಗೆ ಸಂಬಂಧಪಟ್ಟಂತೆ ನಫೆಡ್​ ಸಂಸ್ಥೆಯಿಂದ ಪಾವತಿಸಬೇಕಾದ 691 ಕೋಟಿ ರೂ. ಬಾಕಿ ಹಣವನ್ನು ರಾಜ್ಯದ ಸಂಬಂಧಪಟ್ಟ ಖರೀದಿ ಏಜೆನ್ಸಿಗಳಿಗೆ ಮರು ಪಾವತಿಸಬೇಕು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್​ ಸಿಂಗ್​ ಚೌಹಾಣ್​ಗೆ ಕೇಂದ್ರ ಸಚಿವ ವಿ.ಸೋಮಣ್ಣ ಮನವಿ ಮಾಡಿದರು.

ಶುಕ್ರವಾರ ದೆಹಲಿಯಲ್ಲಿ ಕೃಷಿ ಸಚಿವರನ್ನು ಭೇಟಿಯಾದ ವಿ.ಸೋಮಣ್ಣ, ತುಮಕೂರು, ಮಂಡ್ಯ, ಹಾಸನ, ಮೈಸೂರು, ಚಾಮರಾಜ ನಗರ, ಚಿತ್ರದುರ್ಗ, ಚಿಕ್ಮಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆಂಗು ಬೆಳೆಯುವ ರೈತರ ಹಿತಾಸಕ್ತಿ ಕಾಪಾಡಲು ಅನುಕೂಲವಾಗುತ್ತದೆ ಎಂದು ಮನವರಿಕೆ ಮಾಡಿದರು.

ತುಮಕೂರು ಜಿಲ್ಲೆ ಹೆಚ್ಚಿನ ಪ್ರಮಾಣದಲ್ಲಿ ಉಂಡೆ ಕೊಬ್ಬರಿ ಉತ್ಪಾದಕ ಜಿಲ್ಲೆಯಾಗಿದ್ದು, ಈ ಜಿಲ್ಲೆಯ ರೈತರಿಗೆ ಸಹಾಯ ಮಾಡುವಂತೆ ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರು ಅತೀ ಶೀಘ್ರದಲ್ಲಿ ಬಾಕಿ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.

ಈಗಾಗಲೇ 2599 ಮೆಟ್ರಿಕ್​ ಟನ್​ನಿಂದ 10500 ಮೆಟ್ರಿಕ್​ ಟನ್​ ಮಿಲ್ಲಿಂಗ್​ ಕೊಬ್ಬರಿ ಬೆಂಬಲ ಬೆಲೆ ಯೋಜನೆಯಡಿ ಹೆಚ್ಚಿನ ಪ್ರಮಾಣದಲ್ಲಿ ಖರೀದಿಗೆ ಅನುವು ಮಾಡಿಕೊಟ್ಟ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಿಗೆ ರಾಜ್ಯದ ರೈತರ ಪರವಾಗಿ ಸಚಿವ ಸೋಮಣ್ಣ ಅಭಿನಂದನೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net