

ಕಲಬುರಗಿ: ಕೆಇಎ ನೇಮಕಾತಿ ಪರೀಕ್ಷೆಯ ಬ್ಲೂಟೂತ್ ಅಕ್ರಮದ ಕಿಂಗ್ ಪಿನ್ ಆರ್.ಡಿ. ಪಾಟೀಲ್ ಪರಾರಿಯಾಗಿದ್ದು, ಆತನ ಬಗ್ಗೆ ಐಪಿಎಸ್ ಅಧಿಕಾರಿ ಸುಳಿವು ಕೊಟ್ಟರು ಆತನನ್ನು ಹಿಡಿಯಲು ಆಗುತ್ತಿಲ್ಲ. ಕಣ್ಣಿಗೆ ಕಾಣದ ಶಕ್ತಿ ಇದರ ಹಿಂದೆ ಕೆಲಸ ಮಾಡುತ್ತಿದೆ. ಸರ್ಕಾರದ ಪ್ರಮುಖ ಹುದ್ದೆಯಲ್ಲಿ ಇರುವವರೇ ಆರ್.ಡಿ. ಪಾಟೀಲಗೆ ಬೆಂಬಲ ನೀಡುತ್ತಿದ್ದಾರೆ ಎಂಬುದು ಸಾಬೀತಾಗುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
ನಗರದಲ್ಲಿ ಮಂಗಳವಾರ ಮಾಧ್ಯಮಗಳ ಜತೆ ಮಾತನಾಡಿ, 'ಬಿಜೆಪಿ ಸರ್ಕಾರ ಇದ್ದಾಗ ಕಾಂಗ್ರೆಸಿಗರು ಹಲವು ಆರೋಪ ಮಾಡಿದ್ದರು. ಈಗಿನ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದರು.
ಆರ್.ಡಿ. ಪಾಟೀಲ ಸೇರಿ ಇಡೀ ಅವರ ತಂಡ ಕಾಂಗ್ರೆಸ್ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದೆ. ಈಗ ಅಕ್ರಮದ ಮತ್ತೊಂದು ಕೃತ್ಯ ನಡೆಸಿದ್ದಾರೆ. ಆರ್.ಡಿ. ಪಾಟೀಲ್ ತಪ್ಪಿಸಿಕೊಳ್ಳುವ ಪಿತೂರಿಗೆ ಸಚಿವರು ಸಹಕರಿಸುತ್ತಿದ್ದಾರೆ ಎಂದು ಗಂಭೀರ ಆಪಾದನೆ ಮಾಡಿದರು.
'ಇಡೀ ಕಾಂಗ್ರೆಸ್ ಸರ್ಕಾರ ಇಂತಹ ವ್ಯಕ್ತಿಗಳಿಗೆ ಬೆನ್ನೆಲುಬಾಗಿ ನಿಂತು ಶಕ್ತಿ ತುಂಬುತ್ತಿದ್ದಾರೆ. ಆರ್.ಡಿ. ಪಾಟೀಲ್ ಸಾಮಾನ್ಯ ವ್ಯಕ್ತಿಯಲ್ಲ. ಆತನಿಗೆ ಆಡಳಿತ ಪಕ್ಷದ ಘಟಾನುಘಟಿ ನಾಯಕರ ಸಂಪರ್ಕ ಇದೆ. ಅವರ ಬೆಂಬಲವೂ ಇದೆ. ಇವತ್ತು ಕಣ್ಮರಸಿ ಹೋಗುವ ಪರಿಸ್ಥಿತಿ ಉದ್ಭವಿಸಿದ್ದು, ಪೊಲೀಸ್ ಅಧಿಕಾರಿಗಳಿಗೆ ಕಿಮ್ಮತ್ತು ಇಲ್ಲದಂತೆ ಆಗಿದೆ. ಹಗರಣ ಮಾಡಿಕೊಂಡು ಹೋಗುತ್ತಿರುವುದು ದುರಾದೃಷ್ಟಕರ' ಎಂದರು.
'ಪೊಲೀಸರ ತನಿಖೆಯಿಂದ ಸತ್ಯ ಗೊತ್ತಾಗುತ್ತದೆ. ನ್ಯಾಯ ಸಿಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಖಂಡಿತವಾಗಿ ಈ
ಐಅಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲೇಬೇಕು. ಇಲ್ಲದೆ ಇದ್ದರೆ ಪ್ರತಿ ಬಾರಿ ಈ ರೀತಿ ಪ್ರಕರಣಗಳು ಮಾಡುತ್ತಲೇ ಇರುತ್ತಾನೆ, ಸರ್ಕಾರವೂ ಬೆಂಬಲ ಕೊಡುತ್ತಲೇ ಇರುತ್ತದೆ' ಎಂದು ದೂರಿದರು.