ಸ್ಕೌಟ್, ಗೈಡ್ಸ್‌ನಿಂದ ಸಚಿವರ ಭೇಟಿ

15adarshkdga3
Published on

ಮಡಿಕೇರಿ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜುರವರನ್ನು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭೇಟಿ ಮಾಡಿದ ಕೊಡಗು ಜಿಲ್ಲಾ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಪದಾಧಿಕಾರಿಗಳು ತಮ್ಮ ಬೇಡಿಕೆ ಕುರಿತು ಸಮಾಲೋಚನೆ ನಡೆಸಿದರು.


ಕೊಡಗು ಜಿಲ್ಲಾ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮಾಥ್ಯುರವರು ಜಿಲ್ಲಾ ಸಂಸ್ಥೆಯವರೊಂದಿಗೆ ಭೇಟಿಯಾಗಿ, ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿಗಳಿಂದ ಸರ್ಕಾರದ ಆದೇಶದಂತೆ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.


ಬೇಡಿಕೆ ಕುರಿತು ಸಂಬಂಧಪಟ್ಟ ಅಧಿಕಾರಿಗಳನ್ನು ವಿಚಾರಿಸಿ ಜಿಲ್ಲಾ ಸಂಸ್ಥೆಗೆ ಪೂರ್ಣ ಸಹಕಾರ ನೀಡಲಾಗುವುದು. ಅಲ್ಲದೇ ಜಿಲ್ಲಾ ಸಂಸ್ಥೆಗೆ ಭೇಟಿ ನೀಡಿ ಎಲ್ಲಾ ವಿಷಯಗಳಿಗೆ ಸಹಕರಿಸಲಾಗುವುದು ಎಂದು ಭರವಸೆ ನೀಡಿದರು.


ಈ ಸಂದರ್ಭದಲ್ಲಿ ಜಿಲ್ಲಾ ಗೈಡ್ ಆಯುಕ್ತೆ ರಾಣಿಮಾಚಯ್ಯ ಹಾಗೂ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net