

ಮಡಿಕೇರಿ:
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿಗೆ ಶುಕ್ರವಾರ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಆರಂಭದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮಾತನಾಡಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ತುಂಬಾ ದೂರವಿದ್ದು, ಬಸ್ ಸೌಲಭ್ಯ ಸಮರ್ಪಕವಾಗಿಲ್ಲದೆ ಕಠಿಣ ಪರಿಸ್ಥಿತಿಯನ್ನು ಪ್ರತಿನಿತ್ಯ ಎದುರಿಸಲಾಗುತ್ತಿದೆ. ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಬೇಕು. ಅಂತರ್ಜಾಲ ಸಂಪರ್ಕವಿಲ್ಲದೆ ಅಧ್ಯಯನ ಮತ್ತು ಮಾಹಿತಿ ಸಂಗ್ರಹಕ್ಕೆ ತುಂಬಾ ತೊಂದರೆಯಾಗಿದೆ. ಈಗಿರುವ ವೈಫೈ ಸೇವೆ ಒಂದು ಅಥವಾ ಎರಡು ಕೊಠಡಿಗೆ ಸಾಲುವುದಿಲ್ಲ. ಆದ್ದರಿಂದ ಟವರ್ ನಿರ್ಮಾಣ ಮಾಡಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದರು.
ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಡಾ. ಆರ್.ಶರಣಪ್ರಕಾಶ ಪಾಟೀಲ ಸದ್ಯ ವೈಪೈ ಸೇವೆಯನ್ನು ವಿಸ್ತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಸ್ ಸೌಲಭ್ಯ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗುಡ್ಡಗಾಡು ಪ್ರದೇಶವಾಗಿರುವುದರಿಂದ ಕೆಲವೊಂದು ಕೊರತೆಗಳನ್ನು ಎದುರಿಸಬೇಕಿದ್ದು, ಸಾಧ್ಯವಾದಷ್ಟು ಅಗತ್ಯ ಮೂಲಸೌಲಭ್ಯ ಕಲ್ಪಿಸಲಾಗುವುದು ಎಂದರು.
ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಆಟದ ಮೈದಾನ ಇಲ್ಲದೆ ತೊಂದರೆಯಾಗಿದೆ ಎಂದು ವಿದ್ಯಾರ್ಥಿಯೊಬ್ಬರು ಗಮನ ಸೆಳೆದರು. ಜಾಗ ವಿಶಾಲವಾಗಿ ಇರದಿರುವುದರಿಂದ ಸದ್ಯ ಬಾಸ್ಕೇಟ್ ಬಾಲ್, ವಾಲಿಬಾಲ್, ಇಂತಹ ಆಟಗಳನ್ನು ಆಡಲು ಅಗತ್ಯ ಜಾಗ ಒದಗಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ, ಕಾಲೇಜಿನ ಆವರಣದಲ್ಲಿ ಕನಿಷ್ಠ 100*100 ಆಟದ ಮೈದಾನ ನಿರ್ಮಾಣ ಮಾಡಲು ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ವೈದ್ಯಕೀಯ ಕಾಲೇಜಿನಲ್ಲಿ ಕುಡಿಯುವ ನೀರಿನ ಸಂಪರ್ಕ ಸಮರ್ಪಕವಾಗಿಲ್ಲ. ಬೇಸಿಗೆ ಸಂದರ್ಭದಲ್ಲAತೂ ತುಂಬಾ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ವಿದ್ಯಾರ್ಥಿನಿಯೊಬ್ಬರು ಬೆಳಕು ಚೆಲ್ಲಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ಮಂತರ್ ಗೌಡ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವುದರಿಂದ ಜಲಜೀವನ್ ಮಿಷನ್ ಯೋಜನೆಯಡಿ ನಲ್ಲಿ ನೀರು ಸಂಪರ್ಕ ಕಲ್ಪಿಸಲಾಗಿದೆ. ಸದ್ಯ ಹೊಸ ಬೋರ್‌ವೆಲ್ ಅನ್ನು ನಾಳೆಯೇ ಕೊರೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಎನ್‌ಎಚ್‌ಎಂನಡಿ ಕಳೆದ ನಾಲ್ಕು ತಿಂಗಳಿನಿAದ ವೇತನ ಪಾವತಿಯಾಗಿಲ್ಲ ಎಂದು ವೈದ್ಯರೊಬ್ಬರು ಸಚಿವರ ಗಮನಕ್ಕೆ ತಂದರು. ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಸುಜಾತಾ ರಾಥೋಡ್ ವೇತನ ಪಾವತಿಗೆ ಅಗತ್ಯ ಕ್ರಮವಹಿಸಲಾಗುವುದು ಎಂದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಈ ಬಾರಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನದಲ್ಲಿ 29 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವಾಗಿದೆ.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿಗೆ ಸೂಕ್ತ ಬಂದೋ ಬಸ್ತ್ ಮಾಡಲಾಗಿದೆ. ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆದಷ್ಟು ಶೀಘ್ರ ಪರಿಹರಿಸಲಾಗುವುದು. ಉತ್ತಮ ಕ್ಯಾಂಪಸ್ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜು ಆವರಣದಲ್ಲಿ ರಾಷ್ಟಿçÃಯ ಸೇವಾ ಯೋಜನೆಯಡಿ ‘ಔಷಧಿಯ ಸಸ್ಯವನ’ ನಿರ್ಮಾಣಕ್ಕೆ ಸಚಿವರು ಚಾಲನೆ ನೀಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಗ್ರಾ.ಪಂ.ಸದಸ್ಯ ಜಾನ್ಸನ್ ಪಿಂಟೋ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ಸಂಸ್ಥೆಯ ನಿರ್ದೇಶಕÀ ವಿಶಾಲ್ ಕುಮಾರ್, ಡಾ.ನಂಜುAಡಯ್ಯ, ಡಾ.ಸತೀಶ್ ಇತರರು ಇದ್ದರು.