ವಿದ್ಯಾರ್ಥಿ ಸಂಸತ್‌ಗೆ ಸಚಿವರ ಪದಗ್ರಹಣ

Published on

ವಿಜಯವಾಣಿ ಸುದ್ದಿಜಾಲ ಗೌರಿಬಿದನೂರು

ವಿದ್ಯಾರ್ಥಿ ದೆಶೆಯಿಂದಲೇ ಮತದಾನದ ಬಗ್ಗೆ ತಿಳಿದುಕೊಂಡು ಮತದಾರರಾದ ನಂತರ ಕಡ್ಡಾಯವಾಗಿ ಮತದಾನ ಮಾಡಿ ಉತ್ತಮ ನಾಯಕರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಶಿಕ್ಷಕ ರಾಮಚಂದ್ರ ತಿಳಿಸಿದರು.

ನಗರದ ಕೋಟೆ ಸರ್ಕಾರಿ ಬಾಲಕೀಯರ ಪ್ರೌಢ ಶಾಲೆಯಲ್ಲಿ ಮಂಗಳವಾರ ವಿದ್ಯಾರ್ಥಿ ಸಂಸತ್‌ನ ಸಚಿವರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ ತಿಂಗಳು ವಿದ್ಯಾರ್ಥಿ ಸಂಸತ್‌ಗೆ ಸಚಿವರನ್ನು ನೇಮಕ ಮಾಡಲಾಗಿತ್ತು. ಸದ್ಯ ಅವರಿಗೆ ಶಾಖೆಗಳನ್ನು ಹಂಚಿಕೆ ಮಾಡಿ, ಪದವಿ ನೀಡಲಾಗಿದ್ದು, ವಿದ್ಯಾರ್ಥಿಗಳು ಶಾಲಾ ಕಾರ್ಯಕ್ರಮಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಶಾಲಾ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ. ಹಾಗೆಯೇ ಪ್ರಜಾಪ್ರಭುತ್ವದ ಮೌಲ್ಯಗಳನ್ನು ತಿಳಿದುಕೊಳ್ಳಲು ಅವಕಾಶ ಲಭಿಸುತ್ತದೆ. ಪ್ರತಿ ಮತದಾರನು ಮತ ಚಲಾಯಿಸಿ ಉತ್ತಮ ನಾಯಕನನ್ನು ಆಯ್ಕೆ ಮಾಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net