ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಂಗಾರ

angara minister
Published on

ಮಂಗಳೂರು: ಬಸವರಾಜ ಬೊಮ್ಮಾಯಿಯವರ ನೂತನ ಸಚಿವ ಸಂಪುಟಕ್ಕೆ ಸುಳ್ಯ ಶಾಸಕ ಎಸ್.ಅಂಗಾರ ಸೇರ್ಪಡೆಗೊಂಡಿದ್ದಾರೆ.

ಸುಳ್ಯ ಮೀಸಲು ಕ್ಷೇತ್ರದಿಂದ ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅಂಗಾರ ಅವರು ಇದೇ ಜನವರಿಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಚಿವರಾಗಿದ್ದರು. ಈಗ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಬೊಮ್ಮಾಯಿ ಸಂಪುಟದಲ್ಲೂ ಸ್ಥಾನ ಪಡೆದಿದ್ದಾರೆ. ಅವರು ಬುಧವಾರ ಮಧ್ಯಾಹ್ನ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಹಿಂದಿನ ಸರ್ಕಾರದಲ್ಲಿ ಅವರು ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆಯಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದು, ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net