ಅಪ್ರಾಪ್ತೆ ವಿವಾಹವಾಗಿದ್ದ ಯುವಕ ನ್ಯಾಯಾಂಗ ವಶಕ್ಕೆ

Published on

ಹನೂರು: ಅಪ್ರಾಪ್ತೆಯನ್ನು ವಿವಾಹವಾಗಿದ್ದ ಯುವಕನನ್ನು ಗುರುವಾರ ಮಲೆಮಹದೇಶ್ವರ ಬೆಟ್ಟ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.


ತಾಲೂಕಿನ ಮಲೆಮಹದೇಶ್ವರ ಬೆಟ್ಟ ಸಮೀಪದ ಪುದೂರು ಗ್ರಾಮದ ಕವಿ ಅರಸ್(21) ಬಂಧಿತ. ಈತ ತಾಲೂಕಿನ ಗ್ರಾಮವೊಂದರ ದ್ವಿತೀಯ ಪಿಯುಸಿ ಓದುತ್ತಿದ್ದ ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ಬಳಿಕ ಮನೆಯಿಂದ ಅಪ್ರಾಪ್ತೆ ನಾಪತ್ತೆಯಾಗಿದ್ದಳು. ಈ ಸಂಬಂಧ ಏ.4 ರಂದು ಪಾಲಕರು ಮ.ಬೆಟ್ಟ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ಗುರುವಾರ ತಮಿಳುನಾಡಿನ ಊಟಿಯಲ್ಲಿ ಇಬ್ಬರು ಪತ್ತೆಯಾಗಿದ್ದು ಎರಡು ದಿನಗಳ ಹಿಂದೆಯಷ್ಟೇ ದೇಗುಲವೊಂದರಲ್ಲಿ ಮದುವೆಯಾಗಿದ್ದಾರೆ ಎಂದು ತಿಳಿದು ಬಂದಿದೆ.


ಈ ಸಂಬಂಧ ಪೋಕ್ಸೋ ಕಾಯ್ದೆಯಡಿ ಯುವಕನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದ್ದು, ಅಪ್ರಾಪ್ತೆಯನ್ನು ಚಾಮರಾಜನಗರ ಬಾಲಮಂದಿರಕ್ಕೆ ಕಳುಹಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net