

ವಿಜಯವಾಣಿ ಸುದ್ದಿಜಾಲ ಧಾರವಾಡ
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಸೆ. 3ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 7.35ಕ್ಕೆ ಹುಬ್ಬಳ್ಳಿಗೆ ಆಗಮಿಸುವರು. 9.30ಕ್ಕೆ ಧಾರವಾಡ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡುವರು. 11.30 ಗಂಟೆಗೆ ಅಳ್ನಾವರ ತಾಲೂಕಿನ ಹುಲ್ಲಿಕೇರಿ ಇಂದ್ರಮ್ಮನ ಕೆರೆ ವೀಕ್ಷಿಸುವರು. ಮಧ್ಯಾಹ್ನ 1 ಗಂಟೆಗೆ ತುಪ್ಪರಿ ಹಳ್ಳ, ಉಪ ಹಳ್ಳಗಳ ಕಾಮಗಾರಿ ವೀಕ್ಷಣೆ, ಮಧ್ಯಾಹ್ನ 1.45ಕ್ಕೆ ಹಾರೋಬೇಳವಡಿ ಗ್ರಾಮದ ಹತ್ತಿರ ಬಂಡಹಳ್ಳ ಇಂಗು ಕೆರೆ ನಿರ್ಮಾಣ ಕಾಮಗಾರಿ ವೀಕ್ಷಿಸುವರು. ಸಂಜೆ 4 ಗಂಟೆಗೆ ಧಾರವಾಡ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಹಾಗೂ ಹುಬ್ಬಳ್ಳಿಯ ಹು-ಧಾ ನಗರ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ಸಂಜೆ 5.30 ಗಂಟೆಗೆ ಹುಬ್ಬಳ್ಳಿಯ ಸರ್ಕಿಟ್ ಹೌಸ್‌ನಲ್ಲಿ ಸಣ್ಣ ನೀರಾವರಿ ಇಲಾಖೆ ಬೆಳಗಾವಿ ವೃತ್ತದ ಪ್ರಗತಿ ಪರೀಶೀಲನಾ ಸಭೆ ನಡೆಸುವರು. ಸೆ. 4ರಂದು ಬೆಳಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹಾವೇರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.