ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ, ವ್ಯಕ್ತಿಗೆ 20 ವರ್ಷ ಕಠಿಣ ಶಿಕ್ಷೆ

Court building (2)
Published on

ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ವ್ಯಕ್ತಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸೊ)ರ ನ್ಯಾಯಾಧೀಶರು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1.10 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 6 ತಿಂಗಲು ಸಾದಾ ಕಾರಾವಾಸ ಶಿಕ್ಷೆ ನೀಡಿ ಆದೇಶಿಸಿದ್ದಾರೆ.

ಭದ್ರಾವತಿ ತಾಲೂಕಿನ 25 ವರ್ಷದ ವ್ಯಕ್ತಿ ಶಿಕ್ಷೆ ಒಳಗಾದವ. ಈತ 13 ವರ್ಷದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಸಂತ್ರಸ್ತೆ ತಂದೆ ಭದ್ರಾವತಿ ಹಳೇನಗರ ಠಾಣೆಗೆ ಪೋಕ್ಸೊ ಅಡಿ ದೂರು ನೀಡಿದ್ದರು.

ಅಂದಿನ ತನಿಖಾಧಿಕಾರಿಯಾಗಿದ್ದ ಭದ್ರಾವತಿ ನಗರ ವೃತ್ತ ನಿರೀಕ್ಷಕ ನಂಜಪ್ಪ ಅವರು ನ್ಯಾಯಾಲಯಕ್ಕೆ ದೋಷಾರೋಷಣ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಮಹಿಳಾ ಪೇದೆ ವಿಜಯಕಲಾ ಅವರು ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಈ ಬಗ್ಗೆ ಗುರುವಾರ ವಿಚಾರಣೆ ನಡೆಸಿದ ನ್ಯಾಯಾಧೀಶ ಜೆ.ಎಸ್.ಮೋಹನ್ ಅವರು ಆರೋಪ ಸಾಬೀತಾಗಿದ್ದರಿಂದ 20 ವರ್ಷ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net