ಡಿ ೬ ರಂದು ಅಲ್ಪಸಂಖ್ಯಾತರ ಸಭೆ

9cdc2318-ed7e-4def-b4cf-f9ba412b8de8
Published on

ಮಡಿಕೇರಿ: ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಡಿ೬ರಂದು ಅಲ್ಪಸಂಖ್ಯಾರ ಸಭೆ ಆಯೋಜಿಸಲಾಗಿದೆ ಎಂದು ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಹೇಳಿದರು.


ನಗರದ ಪತ್ರಿಕಾಭವನದಲ್ಲಿ ಮಾತನಾಡಿದ ಅವರು, ಅಂದು ಸಭೆಗೆ ರಾಜ್ಯದ ನಾಯಕರು, ವೀಕ್ಷಕರು ಆಗಮಿಸಲಿದ್ದಾರೆ. ಜನವರಿ ತಿಂಗಳಲ್ಲಿ ಅಲ್ಪಸಂಖ್ಯಾತರ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಈ ಸಂಬಂಧ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದ ಅವರು, ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿರವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.


ಹೈಕಮಾಂಡ್‌ಗೆ ಮನವಿ: ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸುವಂತೆ ಈಗಾಗಲೇ ಹೈಕಮಾಂಡ್‌ಗೆ ಮನವಿ ಸಲ್ಲಿಸಲಾಗಿದೆ. ಮುಂಬರುವ ಎಂಎಲ್‌ಎ ಚುನಾವಣೆಯಲ್ಲಿ ಜಿಲ್ಲೆಯ ೨ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ೨ ಕ್ಷೇತ್ರಗಳಲ್ಲಿ ಯಾವುದಾದರೂ ಒಂದು ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧರಿದ್ದೇವೆ. ಈ ಹಿಂದೆ ಕಾಂಗ್ರೆಸ್ ನಮ್ಮನ್ನು ಹೈಜಾಕ್ ಮಾಡುತ್ತಿತ್ತೇ ಹೊರತು ಅಲ್ಪಸಂಖ್ಯಾತರನ್ನು ಪರಿಗಣಿಸಲಿಲ್ಲ. ಈ ಹಿನ್ನೆಲೆ ಜೆಡಿಎಸ್ ಸ್ಪರ್ಧಿಸಲು ಸಿದ್ಧವಾಗಿದ್ದು, ಗೆಲ್ಲುವ ಆಕಾಂಕ್ಷಿಗಳಿದ್ದಾರೆ ಎಂದು ಹೇಳಿದರು.


ಅಲ್ಪಸಂಖ್ಯಾತ ಘಟಕದ ಹಿರಿಯ ಉಪಾಧ್ಯಕ್ಷ ಪಿ.ಎ.ಯೂಸುಪ್ ಹಾಜಿ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ ಅಲ್ಪಸಂಖ್ಯಾತರಿಗೆ ಸ್ಪರ್ಧಿಸಲು ಅವಕಾಶ ನೀಡಿಲ್ಲ. ತಾನು ರಾಜಕೀಯವಾಗಿ ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದು, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದೇನೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕುಶಾಲನಗರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎ.ಶಬೀರ್, ಜೆಡಿಎಸ್ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಜಾಸೀರ್, ಯುವ ಘಟಕದ ವಕ್ತಾರ ಜಿನಾಸುದ್ದೀನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net