ಅಲ್ಪಸಂಖ್ಯಾತರ ಕಾಲೇಜ್ ಉದ್ಘಾಟನೆ ಸೆ.1ರಂದು

moulana college
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಸದಾಶಿವನಗರದಲ್ಲಿ ನಿರ್ವಿುಸಲಾದ ಸರ್ಕಾರಿ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜಿನ ಉದ್ಘಾಟನಾ ಸಮಾರಂಭ ಸೆ.1ರಂದು ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತಿಯಲ್ಲಿ ಕಾರ್ವಿುಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಉದ್ಘಾಟಿಸುವರು. ವಸತಿ, ವಕ್ಪ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್, ನಗರಾಭಿವೃದ್ಧಿ ಸಚಿವ ಸುರೇಶ ಬಿ.ಎಸ್. ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪಾಲ್ಗೊಳ್ಳುವರು. ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ ಅಧ್ಯಕ್ಷತೆ ವಹಿಸುವರು. ಕಾಲೇಜು ಕಟ್ಟಡದ ವಿವರ: ಸರ್ಕಾರಿ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಕಾಲೇಜು ಕಟ್ಟಡವನ್ನು ಹು-ಧಾ ಮಹಾನಗರ ಪಾಲಿಕೆಯ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 1.24 ಕೋಟಿ ರೂ. ವೆಚ್ಚದಲ್ಲಿ ನಿರ್ವಿುಸಲಾಗಿದೆ. 6 ಬೋಧನಾ ಕೊಠಡಿಗಳು, 1ಕಾರ್ಯಾಲಯ ಹಾಗೂ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಗೃಹಗಳನ್ನು ಕಾಲೇಜು ಕಟ್ಟಡ ಒಳಗೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net