ವಿದ್ಯಾರ್ಥಿನಿ ಜತೆ ಅನುಚಿತ ವರ್ತನೆ, ಯುವಕನ ವಿರುದ್ಧ ದೂರು ದಾಖಲು

Sexual harassement
ಸಾಂದರ್ಭಿಕ ಚಿತ್ರ
Published on

ಸುಳ್ಯ: ವಿದ್ಯಾರ್ಥಿನಿ ಜತೆ ಅನುಚಿತವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಯುವಕನ ವಿರುದ್ಧ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿದ್ದು ಶೋಧ ಕಾರ್ಯ ನಡೆಸಲಾಗುತ್ತಿದೆ. ಮೇ 21ರಂದು ಕಂಪ್ಯೂಟರ್ ಕ್ಲಾಸ್ ಮುಗಿಸಿ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿಕೊಂಡು ಬಂದ ಯುವಕನೊಬ್ಬ ಐ ಲವ್ ಯು ಎಂದು ಹೇಳತೊಡಗಿದಾಗ ವಿದ್ಯಾರ್ಥಿನಿ ತಂದೆಗೆ ಫೋನ್ ಮಾಡಿ ತಿಳಿಸಿದ್ದು, ಆಕೆಯ ತಂದೆ ಬಂದಾಗ ಆ ಯುವಕ ಓಡಿ ಪರಾರಿಯಾಗಿದ್ದಾನೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಹುಡುಕುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net