

ರಾಯಚೂರು: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ ಘಟನೆ ರಾಯಚೂರು ಜಿಲ್ಲೆ ಸಿರವಾರ ಪಟ್ಟಣದಲ್ಲಿ ನಡೆದಿದೆ. ಈ ಹಿನ್ನೆಲೆ ಸಿರವಾರ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ನಡೆದಿದ್ದೇನು?: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಿರವಾರದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ರಾತ್ರೋರಾತ್ರಿ ಕೆಲ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದಾರೆ. ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿರುವುದು ಮುಸ್ಲಿಮರ ಕಣ್ಣಿಗೆ ಬಿದ್ದಿದ್ದುದರಿಂದ ತಮ್ಮ ಮನಸ್ಸಿಗೆ ನೋವಾಗಿ ಮುಸ್ಲಿಂ ಮುಖಂಡರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿ ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತದಲ್ಲಿ ಘಟನೆ ಖಂಡಿಸಿ ಮುಸ್ಲಿಂ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ ತಡೆದು ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ.