ದುಷ್ಕರ್ಮಿಗಳಿಂದ ಗುಡಿಸಲಿಗೆ ಬೆಂಕಿ

ದುಷ್ಕರ್ಮಿಗಳಿಂದ ಗುಡಿಸಲಿಗೆ ಬೆಂಕಿ
Published on

ಹಲಗೂರು: ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ ವಾಸದ ಗುಡಿಸಲು ಸಂಪೂರ್ಣ ಬೆಂಕಿಗಾಹುತಿಯಾದ ಪ್ರಕರಣ ಸಮೀಪದ ಬುಯ್ಯನದೊಡ್ಡಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಗ್ರಾಮದ ಗುರುವಮ್ಮ ಅವರ ಮಗಳು ಹೆರಿಗೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಮ್ಮ ಆಸ್ಪತ್ರೆಯಲ್ಲಿ ಇದ್ದರು. ಪತಿ ಮರೀಗೌಡ ಮತ್ತು ಅಳಿಯ ಮನೆಯಲ್ಲಿ ಮಲಗಿದ್ದರು. ಮಂಗಳವಾರ ತಡರಾತ್ರಿ 1 ಗಂಟೆಯ ಸಮಯದಲ್ಲಿ ಮನೆಯ ಒಂದು ಮೂಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಮರೀಗೌಡ ಮತ್ತು ಅಳಿಯ ಗುಡಿಸಲಿನಿಂದ ಹೊರಬಂದು ಅಪಾಯದಿಂದ ಪಾರಾಗಿದ್ದಾರೆ.

ಗೃಹೋಪಯೋಗಿ ವಸ್ತುಗಳು, ಆಹಾರ ಪದಾರ್ಥಗಳು, ಇತರ ದಾಖಲೆಗಳು ಸೇರಿದಂತೆ ಸಂಪೂರ್ಣ ಗುಡಿಸಲು ಬೆಂಕಿಗಾಹುತಿಯಾಗಿದೆ. ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಗುಡಿಸಲಿಗೆ ಬೆಂಕಿ ಹಚ್ಚಿದ್ದಾರೆ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಮರೀಗೌಡ ಹಲಗೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net