

ಹುಬ್ಬಳ್ಳಿ: ಮನೆ ಮುಂದೆ ನಿಲ್ಲಿಸಿದ್ದ ಆಟೋರಿಕ್ಷಾಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಇಲ್ಲಿಯ ನೇಕಾರ ನಗರದ ಮಹಾಲಕ್ಷ್ಮೀ ಕಾಲನಿಯಲ್ಲಿ ಸಂಭವಿಸಿದೆ.
ವೀರನಗೌಡ ಪಾಟೀಲ ಎಂಬುವರ ಆಟೋರಿಕ್ಷಾ ಬೆಂಕಿಗೆ ಆಹುತಿಯಾಗಿದೆ. ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಿದ್ದ ಆಟೋರಿಕ್ಷಾಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.