ಯುವಕ ನಾಪತ್ತೆ, ಹೊಳೆಗೆ ಬಿದ್ದಿರುವ ಶಂಕೆ

missing
ಕಡಬ ತಹಸೀಲ್ದಾರ ಪ್ರಭಕಾರ ಖಜೂರೆ ಸ್ಥಳಕ್ಕೆ ಭೇಟಿ ನೀಡಿದರು
Published on

ಕಡಬ: ಕಡಬ ತಾಲೂಕಿನ ಕಾಯಿಮಣ ಗ್ರಾಮದ ನಾಯಿತಡ್ಕ ಎಂಬಲ್ಲಿನ ಅವಿವಾಹಿತ ಯುವಕನೋರ್ವ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಹೊಳೆಗೆ ಹಾರಿರಬಹುದು ಎಂಬ ಶಂಕೆಯಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ.

ಕಾಯಿಮಣ ಗ್ರಾಮದ ನಾಯಿತ್ತಡ್ಕ ನಿವಾಸಿ ಹುಕ್ರ ಎಂಬುವರ ಪುತ್ರ ಸುರೇಶ(40)ನಾಪತ್ತೆಯಾದವರು. ಕೂಲಿ ಕೆಲಸ ಮಾಡುತ್ತಿದ್ದು, ವಿಪರೀತ ಮದ್ಯಪಾನದ ಚಟ ಹೊಂದಿದ್ದರು. ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಸೋಮವಾರ ರಾತ್ರಿ ಸುಮಾರು 8.30ಕ್ಕೆ ಯಾರಿಗೂ ಹೇಳದೆ ಮನೆಯಿಂದ ಹೋದವರು ಮಂಗಳವಾರ ಬೆಳಗ್ಗೆ 6 ಗಂಟೆಯವರೆಗೂ ಬಂದಿಲ್ಲ ಎಂದು ಸಹೋದರ ಚಿದಾನಂದ ಬೆಳ್ಳಾರೆ ಠಾಣೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಕಾಪೆಜಾಲು ಹೊಳೆ ಬದಿಯಲ್ಲಿ ಶರ್ಟ್ ಮತ್ತು ಛತ್ರಿ ಪತ್ತೆಯಾಗಿದ್ದು, ಅಗ್ನಿಶಾಮಕ ದಳದವರು ಹುಡುಕಾಟ ನಡೆಸಿದರು. ಇಳಿಸಂಜೆಯ ತನಕ ಶೋಧ ನಡೆಸಿದರೂ ಯಾವುದೇ ಸುಳಿವು ಸಿಕ್ಕಿಲ್ಲ. ಸ್ಥಳಕ್ಕೆ ಕಡಬ ತಹಶೀಲ್ದಾರ್ ಪ್ರಭಾಕರ್ ಖಜೂರೆ, ಬೆಳಂದೂರು ಗ್ರಾಪಂ ಅಧ್ಯಕ್ಷೆ ಪಾರ್ವತಿ ಮರಕ್ಕಡ, ಉಪಾಧ್ಯಕ್ಷ ಜಯಂತ ಅಬೀರ, ಪಿಡಿಒ ನಾರಾಯಣ್, ಗ್ರಾಮ ಆಡಳಿತಾಧಿಕಾರಿ ಪುಷ್ಪರಾಜ್, ಗ್ರಾಪಂ ಸದಸ್ಯರಾದ ಪ್ರವೀಣ್ ಕೆರೆನಾರು, ಮೋಹನ್ ಅಗಳಿ, ರವಿಕುಮಾರ್ ಕೆಡೆಂಜಿ, ಉಮೇಶ್ವರಿ ಅಗಳಿ, ಗ್ರಾಮ ಸಹಾಯಕ ಪ್ರೀತಮ್ ಬೆಳಂದೂರು ಭೇಟಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net