ಪತ್ತೆಯಾಗದ ಬಾಲಕಿ ಸನ್ನಿಧಿ ಮೃತದೇಹ, ಮುಂದುವರಿದ ಶೋಧ

sannidhi
Published on

ಕುಂದಾಪುರ: ಶಾಲೆಯಿಂದ ಮನೆಗೆ ವಾಪಸಾಗುವಾಗ ಕಾಲುಸಂಕದಿಂದ ಜಾರಿ ನದಿಗೆ ಬಿದ್ದು ಸೋಮವಾರ ನಾಪತ್ತೆಯಾದ ಬೈಂದೂರು ತಾಲೂಕು ಕಾಲ್ತೋಡು ಗ್ರಾಮದ ಚಪ್ಪರಿಕೆ ಸರ್ಕಾರಿ ಹಿ.ಪ್ರಾ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ ಮೃತದೇಹ ಮಂಗಳವಾರವೂ ಪತ್ತೆಯಾಗಿಲ್ಲ.

ಮೃತದೇಹ ಪತ್ತೆಗೆ ಅಗ್ನಿಶಾಮಕ ದಳ, ಪೊಲೀಸರು, ಸ್ಥಳೀಯರು, ಈಜುಪಟುಗಳು ಹಾಗೂ ಮುಳುಗು ತಜ್ಞರು ನಿರಂತರವಾಗಿ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಂಗಳವಾರ ಭೇಟಿ ಮನೆ ಮಂದಿಗೆ ಸಾಂತ್ವನ ಹೇಳಿದ್ದಾರೆ. ಕಾಲುಸಂಕ ಇರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಾರ್ಯಾಚರಣೆ ಇನ್ನಷ್ಟು ತೀವ್ರಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಭೇಟಿ ನೀಡಿದರು. ಕುಂದಾಪುರ ಉಪವಿಭಾಗಾಧಿಕಾರಿ ಕೆ. ರಾಜು, ಬೈಂದೂರು ತಹಶಿಲ್ದಾರ್ ಕಿರಣ್ ಗೌರಯ್ಯ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ್ ಕುಮಾರ್ ತಂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net