ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆ

ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆ
Published on

ಬೈಲುಕುಪ್ಪೆ: ಕಾಣೆಯಾಗಿದ್ದ ಯುವಕ ಶುಕ್ರವಾರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ಮರಡಿಯೂರು ಸಮೀಪವಿರುವ ಸೂರ್ಯಪುತ್ರ ಲೇಔಟ್ ನಿವಾಸಿ ಪವನ್ (23) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮೇ 24ರಂದು ನನ್ನ ಸ್ನೇಹಿತ ಕರೆಯುತ್ತಿದ್ದಾನೆ ಅಲ್ಲಿಗೆ ಹೋಗಿ ಬರುತ್ತೇನೆ ಎಂದು ಮನೆಯಲ್ಲಿ ಹೇಳಿ ಹೋದವನು ಮನೆಗೆ ವಾಪಸ್ ಬಂದಿಲ್ಲ ಎಂದು ಆತನ ತಾಯಿ ದಮಯಂತಿ ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರು ನೀಡಿದ್ದರು. ಪಿಎಸ್‌ಐ ರವಿಕುಮಾರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಶುಕ್ರವಾರ ಸಂಜೆ 5 ಗಂಟೆಗೆ ಕೊಡಗು ಜಿಲ್ಲೆಯ ಕಣಿವೆ ಸಮೀಪವಿರುವ ಕಾವೇರಿ ನದಿಯಲ್ಲಿ ಪವನ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆತನ ತಾಯಿ ದಮಯಂತಿ ಮಗನ ಸಾವಿನ ಬಗ್ಗೆ ಅನುಮಾನವಿದೆ ಎಂದು ದೂರು ನೀಡಿದ ಹಿನ್ನೆಲೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಮೋಹನ್‌ರಾಜ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮಡಿಕೇರಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಶವವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net