

ವಿಜಯವಾಣಿ ಸುದ್ದಿಜಾಲ ಧಾರವಾಡ ಧಾರವಾಡ ವಿದ್ಯಾಕಾಶಿ. ಇಲ್ಲಿ ಶಿಕ್ಷಣಕ್ಕೆ ವಿಶೇಷ ಪ್ರಾಧಾನ್ಯತೆ ಇದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆ ಹಾಗೂ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಸಾಮಾನ್ಯ ಮಕ್ಕಳಂತೆ ಶೈಕ್ಷಣಿಕ ಪ್ರಗತಿ ಸಾಽಸಲುಮಿಷನ್ ವಿದ್ಯಾಕಾಶಿ' ಕಾರ್ಯಕ್ರಮ ರೂಪಿಸಲಾಗಿದೆ. ಅದರ ಯಶಸ್ಸಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಎಂದು ಜಿಲ್ಲಾಽಕಾರಿ ದಿವ್ಯ ಪ್ರಭು ಹೇಳಿದರು.
ಧಾರವಾಡ ಜರ್ನಲಿಸ್ಟ್ ಗಿಲ್ಡ್ ನಿಂದ ಗುರುವಾರ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಸ್‌ಎಸ್‌ಎಲ್‌ಸಿ -ಫಲಿತಾಂಶದಲ್ಲಿ ಜಿಲ್ಲೆಗೆ ಕಡಿಮೆ ಸ್ಥಾನ ಬಂದಾಗ ಬೇಜಾರಾಗಿತ್ತು. ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಯೋಜನೆ ರೂಪಿಸಲಾಗಿದೆ. ಅದಕ್ಕಾಗಿ ಶಿಕ್ಷಣ ಇಲಾಖೆಯ ಅಽಕಾರಿಗಳು, ಶಿಕ್ಷಣ ತಜ್ಞರು, ಎನ್‌ಜಿಒಗಳ ಸಹಕಾರದೊಂದಿಗೆ ಮಿಷನ್ ವಿದ್ಯಾಕಾಶ ಕಾರ್ಯಕ್ರಮ ರೂಪಿಸಲಾಗಿದೆ. ಶೈಕ್ಷಣಿಕ ಅಭಿವೃದ್ಧಿಗೆ ಗ್ರಾಮೀಣ ಮಟ್ಟದಿಂದ ಕೆಲಸ ಮಾಡಬೇಕಿದೆ ಎಂದರು.
ಜಿಲ್ಲೆಯಲ್ಲಿ 32 ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಜೊತೆಗೆ ಕಿಮ್ಸ್ ಮತ್ತು ಜಿಲ್ಲಾ ಆಸ್ಪತ್ರೆ ಇದೆ. ಅವುಗಳನ್ನು ಬಲಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಪೌಷ್ಠಿಕತೆಯ ಮಕ್ಕಳನ್ನು ಗುರುತಿಸಿ ಅವರ ಆರೋಗ್ಯ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಬಾಲ್ಯವಿವಾಹ, ಬಾಲ್ಯ ಗರ್ಭಧಾರಣೆ ಮತ್ತು ಬಾಲಕಾರ್ಮಿಕ ಸಮಸ್ಯೆಗಳನ್ನು ನಿವಾರಿಸಲು ಮುಂದಾಗಿದೆ. ಜಿಲ್ಲೆಯ ಆಯ್ದ ಕೆರೆಗಳನ್ನು ಮಾದರಿಯಾಗಿ ಪರಿವರ್ತಿಸಲಾಗುವುದು. ಕೆರೆ ಒತ್ತುವರಿ ತೆರವಿಗೂ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಸರ್ಕಾರದ ಎಲ್ಲ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ವಿವಿಧ ಇಲಾಖೆಗಳೊಂದಿಗೆ ಶ್ರಮ ವಹಿಸಲಾಗುತ್ತಿದೆ. 1.5 ಎಕರೆ ಪ್ರದೇಶದಲ್ಲಿ ಜಿಲ್ಲಾಽಕಾರಿ ನೂತನ ಕಚೇರಿ ಸಂಕೀರ್ಣ ನಿರ್ಮಾಣಕ್ಕೆ 92 ಕೋಟಿ ರೂಪಾಯಿಗಳ ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರದಲ್ಲೇ ಅನುದಾನ ಸಿಗುವ ವಿಶ್ವಾಸವಿದೆ ಎಂದರು.