

ಬೆಳಗಾವಿ: ಕೇಂದ್ರ ಬಿಜೆಪಿ ಸರ್ಕಾರವು ತನ್ನ ಆಡಳಿತ ವೈಫಲ್ಯ ಮುಚ್ಚಿ ಹಾಕಿಕೊಳ್ಳಲು ವಿರೋಧ ಪಕ್ಷದ ನಾಯಕರ ಮೇಲೆ ದಾಳಿ ನಡೆಸಲು ಇಡಿ, ಐಟಿ ಸೇರಿ ಹೀಗೆ ವಿವಿಧ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷಿ$್ಮ ಹೆಬ್ಬಾಳ್ಕರ್ ವಾಗ್ದಾಳಿ ನಡೆಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದವರು, ತನಿಖಾ ಸಂಸ್ಥೆಗಳನ್ನು ರಾಜಕೀಯ ದಾಳವಾಗಿ ಬಳಸುತ್ತಿರುವ ಬಿಜೆಪಿ ನಾಯಕರು ಪ್ರಜಾಪ್ರಭುತ್ವದ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ. ಇದೀಗ ಸುಪ್ರೀಂ ಕೋರ್ಟ್ ಕೂಡ ಇಡಿ ತನಿಖಾ ಸಂಸ್ಥೆಯ ವಿರುದ್ಧ ಆಕ್ರೋಶ ಹೊರಹಾಕಿದೆ ಎಂದರು.
ಈಗಾಗಲೇ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸವೋರ್ಚ್ಚ ನ್ಯಾಯಾಲಯ ಇಡಿಗೆ ಚಾಟಿ ಬೀಸಿದ್ದು, ಇನ್ನಾದರೂ ಇಂತಹ ಕೆಟ್ಟ ರಾಜಕೀಯವನ್ನು ಬಿಜೆಪಿಯವರು ಬಿಡಲಿ ಮತ್ತು ಈವರೆಗಿನ ತಪ್ಪನ್ನು ಒಪ್ಪಿಕೊಂಡು ರಾಷ್ಟ್ರದ ಜನತೆಯ ಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.