ಮದ್ದೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

IMG-20200108-WA0092
Published on

ಮದ್ದೂರು: ರಾಷ್ಟ್ರವ್ಯಾಪಿ ಮುಷ್ಕರ ಬೆಂಬಲಿಸಿ ತಾಲೂಕು ಸಿಐಟಿಯು ಸಂಘಟನೆ ಹಾಗೂ ವಿವಿಧ ಸಂಘಟನೆಗಳು ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದವು.

ತಾಲೂಕು ಗ್ರಾಮ ಪಂಚಾಯತ್ ನೌಕರರ ಸಂಘದ ಅಧ್ಯಕ್ಷ ಜಿ.ಆರ್. ರಾಮು ಹಾಗೂ ಸಿಐಟಿಯು ಮುಖಂಡ ಎಂ.ರಾಜು ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಟಿ.ಬಿ.ವೃತ್ತದಿಂದ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಚಳವಳಿ ನಡೆಸಿದರು.

ಮಿಶ್ರ ಪತ್ರಿಕ್ರಿಯೆ: ಮುಷ್ಕರಕ್ಕೆ ಮುಸ್ಲಿಂ ವರ್ತಕರು ಸಂಪೂರ್ಣ ಸಹಕಾರ ನೀಡಿ ಬೆಂಬಲ ವ್ಯಕ್ತಪಡಿಸಿದರೆ, ಉಳಿದ ವರ್ತಕರು ಪ್ರತಿಭಟನಾ ಮೆರವಣಿಗೆ ಹೊರಟ ನಂತರ ಒಬ್ಬೊಬ್ಬರಾಗಿ ಅಂಗಡಿಗಳನ್ನು ತೆರೆದರು.

ಶಾಲಾ-ಕಾಲೇಜು, ಸರ್ಕಾರಿ ಕಚೇರಿ ಎಂದಿನಂತೆ ತೆರೆದಿದ್ದವು. ಸರ್ಕಾರಿ ಬಸ್‌ಗಳು ಎಂದಿನಂತೆ ಓಡಾಡುತ್ತಿದ್ದವು.
ಮಾತಿನ ಚಕಮಕಿ: ಪ್ರತಿಭಟನಾ ನಿರತರು ಬಲವಂತವಾಗಿ ಶಾಲಾ, ಕಾಲೇಜಿನ ವಿದ್ಯಾರ್ಥಿಗಳನ್ನು ಬಿಡಿಸಲು ಹೋದಾಗ ಪೊಲೀಸರು ಮತ್ತು ಪ್ರತಿಭಟನಾ ನಿರತರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಸ್ವಲ್ಪ ಸಮಯದ ನಂತರ ಪರಿಸ್ಥಿತಿ ತಿಳಿಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net