

ಕುಶಾಲನಗರ:
ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಕುಶಾಲನಗರ ತಾಲೂಕಿನ ವಿವಿಧ ಗ್ರಾ.ಪಂ. ವ್ಯಾಪ್ತಿಯಲ್ಲಿ ಬಹುಕೋಟಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.
ಕುಶಾಲನಗರ ತಾಲೂಕು ವ್ಯಾಪ್ತಿಯ ಕೂಡುಮಂಗಳೂರು, ಕೂಡಿಗೆ, ಹೆಬ್ಬಾಲೆ, ತೊರೆನೂರು, ಶಿರಂಗಾಲ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ದೊಡ್ಡತ್ತೂರು, ಚಿಕ್ಕತ್ತೂರು, ಸುಂದರನಗರ, ವಿನಾಯಕ ಬಡಾವಣೆ, ಬಸವೇಶ್ವರ ಬಡಾವಣೆ, ವಿಜಯನಗರ ಗ್ರಾಮದಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ ನೆರವೇರಿಸಿದರು.
ಕೂಡಿಗೆ ಗ್ರಾ.ಪಂ, ಹೆಬ್ಬಾಲೆ, ತೊರೆನೂರು, ಶಿರಂಗಾಲ ಗ್ರಾ.ಪಂನ ಹಲವು ಗ್ರಾಮಗಳಲ್ಲಿ ಬಹುಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಡಾ. ಮಂತರ್ ಗೌಡ ಆಯಾಯ ವ್ಯಾಪ್ತಿಯ ಗ್ರಾ.ಪಂ. ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭ ಮಾತನಾಡಿದ ಶಾಸಕ ಡಾ. ಮಂಡತ್ ಗೌಡ, ಆಯ್ಕೆಯಾದ ದಿನದಿಂದ ಈವರೆಗೆ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ತರಲಾಗಿದೆ. ಕ್ಷೇತ್ರದ ಅಭಿವೃದ್ಧಿಯ ಧ್ಯೇಯದೊಂದಿಗೆ ಇನ್ನಷ್ಟು ಉತ್ಸಾಹ ಹಾಗೂ ಹುಮ್ಮಸ್ಸಿನಿಂದ ಕಾರ್ಯನಿರ್ವಹಿಸಲಾಗುವುದು ಎಂದರು.
ಈ ಸಂದರ್ಭ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ. ಶಶಿಧರ್, ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷ ಭಾಸ್ಕರ್ ನಾಯಕ್, ಕೂಡುಮಂಗಳೂರು ಗ್ರಾ.ಪಂ ಸದಸ್ಯೆ ಫಿಲೋಮಿನಾ, ಕೆ.ಬಿ. ಶಂಶುದ್ಧೀನ್, ಕಾಂಗ್ರೆಸ್ ಮುಖಂಡರಾದ ಕುಮಾರ್, ತಂಬಿ, ರಫಿಕ್, ಹರೀಶ್, ಆಯಾ ಗ್ರಾ.ಪಂ ವ್ಯಾಪ್ತಿಯ ಪಂಚಾಯಿತಿ ಸದಸ್ಯರು, ಅಧಿಕಾರಿಗಳು, ಪಂಚಾಯಿತಿ ಸಿಬ್ಬಂದಿ ಹಾಗೂ ಇತರರು ಇದ್ದರು.