ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಣೆ

09 yelandur 04
Published on

ಯಳಂದೂರು: ತಾಲೂಕಿನ ಗುಂಬಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಶಾಸಕ ಎ.ಆರ್. ಕೃಷ್ಣಮೂರ್ತಿ ಮಂಗಳವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.


ಈಗಾಗಲೇ ಗ್ರಾಮಕ್ಕೆ ಭೇಟಿ ನೀಡಿದ್ದು ಸಂಬಂಧಪಟ್ಟ ಆರೋಗ್ಯ ಇಲಾಖೆ ಹಾಗೂ ಪಂಚಾಯಿತಿಯಿಂದ ಮಾಹಿತಿ ಪಡೆದುಕೊಂಡಿದ್ದೇನೆ. ನೀರನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಯಾವುದೇ ವಿಷಕಾರಿ ಅಂಶ ಇಲ್ಲ ಎಂಬ ವರದಿ ಬಂದಿದೆ. ರೋಗಿಗಳ ಮಲದ ಸ್ಯಾಂಪಲ್ ಪಡೆದು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಇಲ್ಲಿನ ವೈದ್ಯರು ಮಾಹಿತಿ ನೀಡಿದ್ದಾರೆ ಎಂದು ಶಾಸಕರು ತಿಳಿಸಿದರು.


ಒಳರೋಗಿಗಳಾಗಿ ಮತ್ತೆ 7 ಜನರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಹಲವರು ಚೇತರಿಸಿಕೊಳ್ಳುತ್ತಿದ್ದಾರೆ. ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ ಶುಚಿತ್ವ ಕಾಪಾಡುವಂತೆ ಸೂಚನೆ ನೀಡಲಾಗಿದೆ. ಗ್ರಾಮಕ್ಕೆ ಆಂಬುಲೆನ್ಸ್ ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಲಾಗಿದೆ ಎಂದರು.


ಡಿವೈಎಸ್‌ಪಿ ಸೋಮೇಗೌಡ, ವೈದ್ಯಾಧಿಕಾರಿ ಡಾ.ಶ್ರೀಧರ್, ಡಾ.ನಾಗೇಂದ್ರಮೂರ್ತಿ, ಡಾ.ನಾಗೇಶ್, ಸಿಪಿಐ ಶಿವರಾಜ್ ಮುಧೋಳ್, ಜಿಪಂ ಮಾಜಿ ಉಪಾಧ್ಯಕ್ಷ ಜೆ.ಯೋಗೇಶ್, ಪಪಂ ಸದಸ್ಯ ಬಿ.ರವಿ, ಮುಖಂಡರಾದ ರಾಜೇಂದ್ರ, ನಿಂಗರಾಜು, ಮಲ್ಲು, ಶಿವರಾಮು, ಗೌಡಹಳ್ಳಿ ರಾಜೇಶ್, ಶಾಸಕರ ಆಪ್ತ ಕಾರ್ಯದರ್ಶಿ ಚೇತನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net