ಸದಾಶಿವ ಆಯೋಗ ವರದಿ ಜಾರಿ ಹೋರಾಟಕ್ಕೆ ಬೆಂಬಲ

15 Dwd 1 Aravind Bellad
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಒಳಮೀಸಲಾತಿ ಕಲ್ಪಿಸುವ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ ಎಂದು ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಹೇಳಿದ್ದಾರೆ.
ಪ್ರಕಟಣೆ ನೀಡಿರುವ ಅವರು, ಸುಪ್ರೀಂ ಕೋರ್ಟ್ ಆದೇಶದಂತೆ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಜಾರಿ ಮಾಡಬೇಕು. ದೇಶಾದ್ಯಂತ ದಲಿತಪರ ಸಂಘಟನೆಗಳು ಸುಮಾರು 30 ವರ್ಷಗಳಿಂದ ನಡೆಸುತ್ತಿರುವ ಹೋರಾಟದ ಫಲವಾಗಿ ಸುಪ್ರೀಂ ಕೋರ್ಟ್ ಒಳಮೀಸಲಾತಿ ಆದೇಶವನ್ನು ಎತ್ತಿ ಹಿಡಿದು, ಆಯಾ ರಾಜ್ಯಗಳಿಗೆ ಒಳಮೀಸಲಾತಿ ಜಾರಿಗೊಳಿಸುವ ಅಽಕಾರ ನೀಡಿದೆ. ನ್ಯಾಯಾಲಯದ ಆದೇಶದನ್ವಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಹಾಗೂ ದಲಿತಪರ ಸಂಘಟನೆಗಳಿAದ ನಗರದಲ್ಲಿ ಅ. 16ರಂದು ಒಳಮೀಸಲಾತಿ ಜಾರಿಗಾಗಿ ನಡೆಸಲಿರುವ ಬೃಹತ್ ಪ್ರತಿಭಟನಾ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಬೆಲ್ಲದ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net