ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕರು ಚಲಾಯಿಸುತ್ತಿದ್ದ ಕಾರು ಪಲ್ಟಿ

Aravind Bellada MLA Car Accident near belagavi khanapura 25 FEB 20
Published on

ಧಾರವಾಡ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಚಲಾಯಿಸುತ್ತಿದ್ದ ಕಾರು ಪಲ್ಟಿಯಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ.

ಅವರು ಕುಟುಂಬ ಸಮೇತರಾಗಿ ಗೋವಾಕ್ಕೆ ಹೋಗಿದ್ದು, ಮಂಗಳವಾರ ಅಲ್ಲಿಂದ ವಾಪಸಾಗುತ್ತಿದ್ದರು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಬಳಿ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಶಾಸಕರೇ ಕಾರು ಚಲಾಯಿಸುತ್ತಿದ್ದರು ಎಂದು ವರದಿಯಾಗಿದೆ.

ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಎಲ್ಲರೂ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net