

ಮೋರಟಗಿ: ಸುತ್ತಲಿನ ಗ್ರಾಮಗಳ ಜನರಿಗೆ ಮೋರಟಗಿ ಸರ್ಕಾರಿ ಆಸ್ಪತ್ರೆ ಕೇಂದ್ರ ಬಿಂದುವಾಗಿದ್ದು, ಸುಸಜ್ಜಿತವಾಗಿ ಮೂಲಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗೆ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಗ್ರಾಮದ ಸಮುದಾಯ ಅರೋಗ್ಯ ಕೇಂದ್ರದ ಮೂಲಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ನನ್ನ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಸಾರ್ವಜನಿಕರು ಗುತ್ತಿಗೆದಾರರಿಗೆ ಸಹಕಾರ ನೀಡಿ ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಜಿಪಂ ಮಾಜಿ ಸದಸ್ಯ ಎನ್.ಆರ್.ತಿವಾರಿ, ಪಿಕೆಪಿಎಸ್ ಅಧ್ಯಕ್ಷ ವೀರನಗೌಡ ಪಾಟೀಲ, ಎಂ.ಕೆ.ಕಣ್ಣಿ, ಎನ್.ಎನ್.ಪಾಟೀಲ, ರವಿಕಾಂತ ನಡುವಿನಕೇರಿ, ಸಲೀಂ ಕಣ್ಣಿ, ಪ್ರವೀಣ ಕಂಠಿಗೊಂಡ, ರಜಾಕ ಬಾಗವಾನ, ಭೂತಾಳಿ ವಸ್ತಾರಿ, ಶಿವು ಕೆರಿಗೊಂಡ ಸೇರಿ ಸಮುದಾಯ ಅರೋಗ್ಯ ಕೇಂದ್ರದ ಸಿಬ್ಬಂದಿ ಇದ್ದರು.
ವೈದ್ಯಾಧಿಕಾರಿ ಬದಲಾವಣೆ: ಭೂಮಿಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕ ಅಶೋಕ ಮನಗೂಳಿ ಅವರಿಗೆ ಸಾರ್ವಜನಿಕರು ಈಗಿರುವ ವೈದ್ಯಾಧಿಕಾರಿ ಡಾ.ಶಶಿಕಾಂತ ಬಾಗೇವಾಡಿ ಅವರು ಆಸ್ಪತ್ರೆಗೆ ಸರಿಯಾಗಿ ಬರುವುದಿಲ್ಲ. ಸಿಬ್ಬಂದಿಗಳೇ ಸರ್ವಾಧಿಕಾರಿಗಳಾಗಿದ್ದಾರೆ. ಕೂಡಲೇ ಬೇರೆ ವೈದ್ಯಾಧಿಕಾರಿ ನೇಮಕ ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು ಜಿಲ್ಲಾ ಅರೋಗ್ಯ ಅಧಿಕಾರಿಗೆ ೆನ್ ಕರೆ ಮಾಡಿ ಕೂಡಲೇ ಡಾ.ಗಿರೀಶ ಪಾಟೀಲ ಅವರಿಗೆ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಲು ಆದೇಶ ಪತ್ರ ನೀಡುವಂತೆ ಸೂಚಿಸಿದರು. ಶಾಸಕರ ಕಾರ್ಯಕ್ಕೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದರು.